ಬೆಳ್ತಂಗಡಿ: ತಾಲ್ಲೂಕು ಮಟ್ಟದ ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆಯು ಸಮಿತಿ ಅಧ್ಯಕ್ಷ ಪದ್ಮನಾಭ ಸಾಲ್ಯಾನ್ ಅಧ್ಯಕ್ಷತೆಯಲ್ಲಿ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.

ಮೆಸ್ಕಾಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆಹಾರ ಇಲಾಖೆ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮತ್ತು ಉದ್ಯೋಗ ವಿನಿಮಯ ಕಚೇರಿಗಳ ಮೂಲಕ ಗೃಹಜ್ಯೋತಿ, ಗೃಹಲಕ್ಷ್ಮೀ, ಅನ್ನಭಾಗ್ಯ, ಶಕ್ತಿ ಹಾಗೂ ಯುವನಿಧಿ ಯೋಜನೆಗಳಲ್ಲಿ ಸರ್ಕಾರದಿಂದ ಬಿಡುಗಡೆಯಾದ ಅನುದಾನ ಮತ್ತು ಸವಲತ್ತು ಪಡೆದ ಫಲಾನುಭವಿಗಳ ಸಂಖ್ಯೆಯನ್ನು ಪರಿಶೀಲಿಸಲಾಯಿತು.

ಲಾಯಿಲ-ಕೊಲ್ಲಿ ಮತ್ತು ಬಜಿರೆ-ಗುಂಡೂರಿ-ಹೊಕ್ಕಾಡಿಗೋಳಿ ರಸ್ತೆಗಳಲ್ಲಿ ಸರ್ಕಾರಿ ಬಸ್ ಒದಗಿಸಲು ಒತ್ತಾಯಿಸಲಾಯಿತು.

ಸಭೆಯಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್, ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಶೇಖರ್ ಕುಕ್ಕೇಡಿ, ತಾಲ್ಲೂಕು ಸಮಿತಿ ಸದಸ್ಯರು, ಇಲಾಖಾಧಿಕಾರಿಗಳು, ತಾಲ್ಲೂಕು ಪಂಚಾಯಿತಿ ಅಧೀಕ್ಷಕ ಡಿ.ಪ್ರಶಾಂತ್, ನೋಡೆಲ್ ಅಧಿಕಾರಿ ಹೆರಾಲ್ಡ್ ಸಿಕ್ಷೇರಾ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.