ಬೆಳ್ತಂಗಡಿ: ತಾಲ್ಲೂಕಿನ 2 ಗ್ರಾಮ ಪಂಚಾಯಿತಿಗಳ 2 ಸ್ಥಾನಗಳಿಗೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಬೆಂಬಲಿತರು ತಲಾ ಒಂದೊಂದು ಸ್ಥಾನಗಳಲ್ಲಿ ಗೆಲುವು ಪಡೆದಿದ್ದಾರೆ.

ಹೊಸಂಗಡಿ ಗ್ರಾಮ ಪಂಚಾಯತಿಯ ಮೂರನೇ ವಾರ್ಡ್ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಆನಂದ ಬಂಗೇರ ಗೆದ್ದಿದ್ದಾರೆ. ಆನಂದ ಬಂಗೇರ ಅವರಿಗೆ 457 ಮತಗಳು ಲಭಿಸಿದ್ದು, ಬಿಜೆಪಿ ಬೆಂಬಲಿತ ಸುನಿಲ್ ಶೆಟ್ಟಿ ಅವರಿಗೆ 274 ಮತಗಳು ಲಭಿಸಿವೆ. ಆನಂದ ಬಂಗೇರ 183 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಬೆಂಬಲಿತ ಸದಸ್ಯ ಹರಿಪ್ರಸಾದ್ ನಿಧನದಿಂದ ಈ ಸ್ಥಾನ ತೆರವಾಗಿತ್ತು.

ಪುದುವೆಟ್ಟು ಗ್ರಾಮ ಪಂಚಾಯಿತಿ ಉಪಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಜಯಿಸಿದ್ದಾರೆ. ಬೆಜೆಪಿ ಬೆಂಬಲಿತರಾಗಿ ಸ್ಪರ್ಧಿಸಿದ್ದ ಜಯಲಕ್ಷ್ಮಿ ಅವರು 372 ಮತ ಪಡೆದು ವಿಜೇತರಾದರು. ಕಾಂಗ್ರೆಸ್ ಪಕ್ಷದ ಬೆಂಬಲದೊಂದಿಗೆ ಕಣಕ್ಕೆ ಇಳಿದಿದ್ದ ಸಿಂಧು ಅವರಿಗೆ 120 ಮತಗಳು ಮಾತ್ರ ಲಭಿಸಿದ್ದವು. 372 ಮತಗಳ ಅಂತರದಿಂದ ಬಿಜೆಪಿ ಬೆಂಬಲಿತ ಅಭ್ಯರ್ಥಿ ಗೆಲುವು ಪಡೆದರು. ಬಿಜೆಪಿ ಬೆಂಬಲಿತ ಸದಸ್ಯೆ ಅನಿತಾ ರಾಜೀನಾಮೆಯಿಂದ ಈ ಸ್ಥಾನ ತೆರವಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.