ಬೆಳ್ತಂಗಡಿ: ‘ಬಿ.ಆರ್.ಅಂಬೇಡ್ಕರ್ ಅವರ ಚಿಂತನೆಗಳನ್ನು ಅಳವಡಿಸಿಕೊಂಡಾಗ ಪ್ರತಿಯೊಬ್ಬರ ಜೀವನ ಪರಿಪೂರ್ಣಗೊಳ್ಳುತ್ತದೆ’ ಎಂದು ಬೆಳ್ತಂಗಡಿ ಡಿವೈಎಸ್ಪಿ ರೋಹಿಣಿ ಸಿ.ಕೆ ಹೇಳಿದರು.

ಉಜಿರೆ ಗ್ರಾಮದ ಗಾಂಧಿನಗರದಲ್ಲಿ ನಡೆದ ಡಾ.ಬಿ.ಆರ್ ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

‘ಅಂಬೇಡ್ಕರ್ ರಚಿಸಿದ ಸಂವಿಧಾನದಿಂದ ಭಾರತೀಯರು ಸಹಬಾಳ್ವೆಯ ಜೀವನ ನಡೆಸುತ್ತಿದ್ದೇವೆ. ಅಂಬೇಡ್ಕರ್ ಅವರು ಒಂದು ಜಾತಿ, ಧರ್ಮಕ್ಕೆ ಸೀಮಿತವಾಗಿಲ್ಲ. ಬದಲಾಗಿ ವಿಶ್ವಮಾನವರಾಗಿದ್ದಾರೆ. ಸಂವಿಧಾನ ನಮಗೆ ನೀಡಿರುವ ಹಕ್ಕುಗಳನ್ನು ತಿಳಿದು ಕೊಂಡು ಬದುಕಬೇಕು’ ಎಂದರು.

ಸಾಮಾಜಿಕ ಹೋರಾಟಗಾರ ಶೇಖರ್ ಲಾಯಿಲ ಮಾತನಾಡಿ, ‘ಜಗತ್ತಿನೆಲ್ಲೆಡೆ ಜನ್ಮದಿನ ಆಚರಿಸಿಕೊಳ್ಳುವ ಏಕೈಕ ನಾಯಕ ಡಾ.ಬಿ.ಆರ್.ಅಂಬೇಡ್ಕರ್. ಅಂತಹ ಮಹಾನ್ ಚೇತನವನ್ನು ನಾವು ಒಂದು ದಿನಕ್ಕೆ ಸೀಮಿತಗೊಳಿಸುವ ಬದಲಾಗಿ ದಿನನಿತ್ಯ ಅವರನ್ನು ಅನುಸರಿಸುವ ಅಗತ್ಯವಿದೆ. ಸಂವಿಧಾನದ ಪೀಠಿಕೆಯಂತೆ ಸರ್ವಧರ್ಮ ಸಮನ್ವಯತೆಯನ್ನು ಸಾಧಿಸುವ ಮೂಲಕ ಸಾಮರಸ್ಯದ ಸಮಾಜದ ನಿರ್ಮಾಣಕ್ಕೆ ಕಟಿಬದ್ಧರಾಗಬೇಕು’ ಎಂದು ಅವರು ಹೇಳಿದರು.

ಉಜಿರೆ ಗ್ರಾ.ಪಂ ಮಾಜಿ ಅಧ್ಯಕ್ಷ ಶ್ರೀನಿವಾಸ್ ಕೆ ಮಾತನಾಡಿದರು. ಉದ್ಯಮಿ ಇರ್ಫಾನ್ ಗಾಂಧಿನಗರ, ಗಾಂಧಿನಗರ ಖಲೀಫಾ ಜುಮ್ಮಾ ಮಸೀದಿ ಅಧ್ಯಕ್ಷ ಅಕ್ಬರ್ ಹಾಜರಿದ್ದರು. ವಿನಯ್ ಕುಮಾರ್ ಸ್ವಾಗತಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-29-780734234

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.