ಬೆಳ್ತಂಗಡಿ (ದಕ್ಷಿಣ ಕನ್ನಡ): ವೇಣೂರು ಬಾಹುಬಲಿಯ ಮಹಾಮಸ್ತಕಾಭಿಷೇಕ 2024ರ ಫೆ. 22ರಿಂದ ಮಾರ್ಚ್ 1ರವರೆಗೆ ನಡೆಯಲಿದೆ.
ಶನಿವಾರ ಶ್ರೀದಿಗಂಬರ ತೀರ್ಥಕ್ಷೇತ್ರ ಸಮಿತಿ ವತಿಯಿಂದ ವೇಣೂರು ಬಾಹುಬಲಿ ಭವನದಲ್ಲಿ ಭಗವಾನ್ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕದ ಪೂರ್ವಭಾವಿ ಶ್ರಾವಕರ ಸಮಾಲೋಚನಾ ಸಭೆಯಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ವೇಣೂರಿನ ಶ್ರೀ ದಿಗಂಬರ ಜೈನ ತೀರ್ಥಕ್ಷೇತ್ರ ಸಮಿತಿ ಅಧ್ಯಕ್ಷ ವೀರೇಂದ್ರ ಹೆಗ್ಗಡೆ ಅವರು ದಿನಾಂಕ ಘೋಷಿಸಿದರು.
ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ ಮಹೋತ್ಸವ ಸಮಿತಿಯ ಅಧ್ಯಕ್ಷರಾಗಿ ವೀರೇಂದ್ರ ಹೆಗ್ಗಡೆ, ಕಾರ್ಯಾಧ್ಯಕ್ಷರಾಗಿ ಅಳದಂಗಡಿ ಅರಮನೆಯ ತಿಮ್ಮಣ್ಣರಸ ಪದ್ಮಪ್ರಸಾದ್ ಅಜಿಲ, ಪ್ರಧಾನ ಕಾರ್ಯದರ್ಶಿಯಾಗಿ ವಿ.ಪ್ರವೀಣ್‌ಕುಮಾರ್ ಇಂದ್ರ ಹಾಗೂ ಕೋಶಾಧಿಕಾರಿಯಾಗಿ ಪಿ.ಜಯರಾಜ್ ಕಂಬ್ಳಿ ಅವರನ್ನು ಆಯ್ಕೆ ಮಾಡಲಾಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.