ಬೆಳ್ತಂಗಡಿ: ಬಂಗಾಡಿ ಸತ್ಯ ಸಾರಮಾನಿ ಕಾನದ ಕಟದ ಜನ್ಮಭೂಮಿ ದೈವಸ್ಥಾನದ ಜೀರ್ಣೋದ್ಧಾರ ಕಾರ್ಯದ ವಿಜ್ಞಾಪನಾ ಪತ್ರ ಬಿಡುಗಡೆ ಕಾರ್ಯಕ್ರಮ ಮೇ 17ರಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ ಎಂದು ಬಂಗಾಡಿ ಸತ್ಯ ಸಾರಮಾನಿ ಕಾನದ ಕಟದ ಜನ್ಮಭೂಮಿ ದೈವಸ್ಥಾನದ ಜೀರ್ಣೋದ್ಧಾರ ಸಮಿತಿ ಉಪಾಧ್ಯಕ್ಷ ಲಕ್ಷ್ಮಣ್ ಜಿ.ಎಸ್. ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ವಿಜ್ಞಾಪನಾ ಪತ್ರ ಬಿಡುಗಡೆ ಮಾಡಲಿದ್ದು, ಸರ್ಕಾರದ ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಶೇಖರ್ ಕುಕ್ಕೇಡಿ, ದಕ್ಷಿಣ ಕನ್ನಡ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಹರಿಯಪ್ಪ ಮುತ್ತೂರು ಭಾಗವಹಿಸಲಿದ್ದಾರೆ ಎಂದರು.

ಕೆಲವು ವರ್ಷಗಳಿಂದ ಶಿಥಿಲಾವಸ್ಥೆಯಲ್ಲಿರುವ ಬಂಗಾಡಿ ಸತ್ಯಸಾರಮಾನಿ ದೈವಸ್ಥಾನವು ಊರ, ಪರ ಊರ ದೈವಜ್ಞರ ಮಾರ್ಗದರ್ಶನದಂತೆ ಸುಮಾರು ₹ 40 ಲಕ್ಷ ಅಂದಾಜು ವೆಚ್ಚದಲ್ಲಿ ಜೀರ್ಣೋದ್ಧಾರಗೊಳ್ಳಲಿದೆ. ಸತ್ಯ ಸಾರಮಾನಿ ದೈವಸ್ಥಾನದ ಮುಂದೆ ಬೆಮ್ಮೆರೆ ಗುಂಡ, ತಾಯಿ ಬೊಲ್ಲೆ, ಅಂದ್ರರ ಪುತ್ಥಳಿ ಮೂಡಿ ಬರಲಿದೆ ಎಂದು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸಂಜೀವ ಆರ್., ಕಾರ್ಯಾಧ್ಯಕ್ಷ ವಸಂತ್ ಬಿ.ಕೆ. ತಿಳಿಸಿದರು.

ಆಡಳಿತ ಮಂಡಳಿ ಅಧ್ಯಕ್ಷ ನಾರಾಯಣ ಎಂ.ಟಿ., ಗೌರವಾಧ್ಯಕ್ಷ ವೆಂಕಣ್ಣ ಕೊಯ್ಯೂರು, ಉಪಾಧ್ಯಕ್ಷ ರಮೇಶ್ ಆರ್., ಕೋಶಾಧಿಕಾರಿ ಕೆ.ನೇಮಿರಾಜ್ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-29-603998982

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.