ಬೆಳ್ತಂಗಡಿ: ನಿಲ್ಲಿಸಿದ್ದ ಬೈಕ್ ಕಳವು ಮಾಡಿದ ಪ್ರಕರಣವನ್ನು ವೇಣೂರು ಪೊಲೀಸರು ಪತ್ತೆ ಮಾಡಿದ್ದು, ಇಬ್ಬರನ್ನು ಬಂಧಿಸಿದ್ದಾರೆ.

ವೇಣೂರು ಗ್ರಾಮದ ಕೆರೆಕೋಡಿ ನಿವಾಸಿ ಮಹಮ್ಮದ್ ಇರ್ಷಾದ್ (25) ಮತ್ತು ಪಡಂಗಡಿ ಗ್ರಾಮದ ಕನ್ನಡಿಕಟ್ಟೆ ನಿವಾಸಿ ಸಾದಿಕ್ ಖಾನ್ (26) ಆರೋಪಿಗಳು.

ನ.11ರಂದು ರಾತ್ರಿ ಕುಕ್ಕೇಡಿ ನಿವಾಸಿ ಸಂಪತ್ ಕುಮಾರ್ ಅವರು ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ನಿಟ್ಟಡೆ ಗ್ರಾಮದ ಪಾಣೂರು ಗುರುನಾರಾಯಣ ಸರ್ಕಲ್ ಬಳಿ ಬೈಕ್ ನಿಲ್ಲಿಸಿ ಹೋಗಿದ್ದರು. ನ.12ರಂದು ಬಂದು ನೋಡಿದಾಗ ಬೈಕ್ ಇರಲಿಲ್ಲ. ಈ ಬಗ್ಗೆ ನ.13ರಂದು ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

ವೇಣೂರು ಪಿಎಸ್ಐ ಓಮನ ಮತ್ತು ಸಿಬ್ಬಂದಿ ನ.20ರಂದು ವೇಣೂರು ಗ್ರಾಮದ ಕೆರೆಕೋಡಿಯಲ್ಲಿ ಕರ್ತವ್ಯದ ವೇಳೆ ಇಬ್ಬರು ಯುವಕರು ನಂಬರ್ ಪ್ಲೇಟ್ ಇಲ್ಲದ ಬೈಕ್ನಲ್ಲಿ ಬರುತ್ತಿದ್ದಾಗ ತಡೆದು ನಿಲ್ಲಿಸಿ ತಪಾಸಣೆ ಮಾಡಿದಾಗ ಯಾವುದೇ ದಾಖಲೆಗಳು ಇರಲಿಲ್ಲ. ಬೈಕ್ ವಶಕ್ಕೆ ಪಡೆದುಕೊಂಡು ಇಬ್ಬರನ್ನು ವಿಚಾರಣೆ ನಡೆಸಿದಾಗ ಗುರುನಾರಾಯಣ ಸರ್ಕಲ್ ಬಳಿ ನಿಲ್ಲಿಸಿದ ಬೈಕ್ ಕಳವು ಮಾಡಿರುವುದನ್ನು ಒಪ್ಪಿಕೊಂಡಿದ್ದಾರೆ. ಆರೋಪಿಗಳಲ್ಲಿ ಇರ್ಷಾದ್ ಮೇಲೆ ವೇಣೂರು ಪೊಲೀಸ್ ಠಾಣೆಯಲ್ಲಿ ಮತ್ತು ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಗಾಂಜಾ ಪ್ರಕರಣ ದಾಖಲಾಗಿದೆ.

ಆರೋಪಿಗಳನ್ನು ಶುಕ್ರವಾರ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಇಬ್ಬರಿಗೂ 14 ದಿನ ನ್ಯಾಯಾಂಗ ಬಂಧನ ವಿಧಿಸಿದೆ.

ವೇಣೂರು ಪಿಎಸ್ಐಗಳಾದ ಅಕ್ಷಯ್, ಓಮನ, ಎಎಸ್ಐ ವೆಂಕಟೇಶ್ ನಾಯ್ಕ್, ಸಿಬ್ಬಂದಿ ಮೋಹನ್, ಬಸವರಾಜ್, ಕೃಷ್ಣ, ಕೇಶವತಿ, ನಾಗರಾಜಪ್ಪ, ರಾಕೇಶ್, ಈರ ನಾಯ್ಕ್, ಚಾಲಕ ಕಿರಣ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.