ಭಾನುವಾರ, 26 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳ್ತಂಗಡಿ | ಕಾಂಕ್ರೀಟ್ ರಸ್ತೆ: ಗ್ರಾಮಸ್ಥರಿಂದ ಗುತ್ತಿಗೆದಾರರ ತರಾಟೆ

Published 1 ಮೇ 2024, 15:47 IST
Last Updated 1 ಮೇ 2024, 15:47 IST
ಅಕ್ಷರ ಗಾತ್ರ

ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಉದ್ದದ ಪಲ್ಕೆ-ಕೋಡಿರಸ್ತೆಗೆ ನಿರ್ಮಾಣವಾಗುತ್ತಿದ್ದ ಕಾಮಗಾರಿ ಅವೈಜ್ಞಾನಿಕವಾಗಿ ನಿರ್ಮಿಸಲಾಗುತ್ತಿದೆ ಎಂದು ಆರೋಪಿಸಿ ಗ್ರಾಮಸ್ಥರು ರಸ್ತೆ ಕಾಮಗಾರಿಗೆ ತಡೆಯೊಡ್ಡಿದ ಘಟನೆ ಬುಧವಾರ ನಡೆದಿದೆ.

ಕಡಿರುದ್ಯಾವರ ಗ್ರಾಮದ ಉದ್ದದ ಪಲ್ಕೆ-ಕೋಡಿರಸ್ತೆ ನಡುವೆ ಸುಮಾರು 200 ಮೀಟರ್ ಕಾಂಕ್ರೀಟ್ ರಸ್ತೆಗೆ ಜಿಲ್ಲಾ ಪಂಚಾಯಿತಿ ನಿಧಿಯಿಂದ ಸುಮಾರು ₹ 10 ಲಕ್ಷ ಅನುದಾನದಡಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿತ್ತು. ಕಾಂಕ್ರಿಟ್ ರಸ್ತೆ ನಿರ್ಮಾಣದ ವೇಳೆ ಸ್ಕಿಡ್ಡರ್ ಅಳವಡಿಸದೆ ನಿರ್ಮಿಸಿದ್ದಾರೆ. ಇದರಿಂದ ರಸ್ತೆ ಒಂದು ವರ್ಷವೂ ಬಾಳಿಕೆ ಬರುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಗ್ರಾಮಸ್ಥರು ಜಿಲ್ಲಾ ಪಂಚಾಯಿತಿ ಎಂಜಿನಿಯರ್ ಅವರನ್ನು ತರಾಟೆಗೆ ತೆಗೆದುಕೊಂಡರು.

ಇದಕ್ಕೆ ಗುತ್ತಿಗೆದಾರರು ಈ ವಿಧಾನ ನಮ್ಮಲ್ಲಿಲ್ಲ, ನಾವಿನ್ನು ರಸ್ತೆ ನಿರ್ಮಿಸುವುದಿಲ್ಲ ಎಂದು ಕಾಮಗಾರಿ ಅರ್ಧದಲ್ಲೆ ನಿಲ್ಲಿಸಿ ವಾಹನ ತೆರವುಗೊಳಿಸಲು ನಿರ್ಧರಿಸಿದ್ದರು. ಇದಕ್ಕೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರತ್ನಾವತಿ ಬಾಲಕೃಷ್ಣ ಮೂಲಕ ಸೂಕ್ತ ಕ್ರಮಕ್ಕೆ ಆಗ್ರಹಿಸಿದರು. ಅಧ್ಯಕ್ಷರು ವೈಜ್ಞಾನಿಕ ಕ್ರಮದಲ್ಲೆ ರಸ್ತೆ ನಿರ್ಮಿಸುವಂತೆ ಗುತ್ತಿಗೆದಾರರಿಗೆ ಸೂಚಿಸಿದ್ದಾರೆ.

ಇದೇ ಪದ್ಧತಿಯಲ್ಲಿ ದೂಂಬೆಟ್ಡು ಸಮೀಪ ಈ ರೀತಿ ರಸ್ತೆ ನಿರ್ಮಿಸಿದ್ದರಿಂದ ರಸ್ತೆ ಬಾಳಿಕೆ ಬಂದಿರಲಿಲ್ಲ. ಹಾಗಾಗಿ ಸ್ಕಿಡ್ಡರ್ ಬಳಸಿ ರಸ್ತೆ ನಿರ್ಮಿಸಿ ಎಂದು ಗ್ರಾಮಸ್ಥರು ಆಗ್ರಹಿಸಿದರು. ಈ ವೇಳೆ ಗ್ರಾಮಸ್ಥರಾದ ರಾಮಚಂದ್ರ ಗೌಡ, ರಾಘವೇಂದ್ರ ಭಟ್, ಜಗದೀಶ್ ಗೌಡ, ಕಮಲಾ ಕೋಡಿ, ನಿರಂಜನ್ ಉದ್ದದ ಪಲ್ಕೆ, ಜಗದೀಶ್ ನಾಯ್ಕ್, ರಾಜೇಶ್ ಕೋಡಿ, ಸಂಜೀವ ಗೌಡ, ಕೇಶವ ರಾಮಂದೊಟ್ಟು, ಕೃಷ್ಣಪ್ಪ. ಗಿರಿಯಮ್ಮ, ಪುಷ್ಪಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT