ಬೆಳ್ತಂಗಡಿ: ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ವಿರುದ್ಧ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಹಾಗೂ ಯುವ ಕಾಂಗ್ರೆಸ್ ವತಿಯಿಂದ ಬೆಳ್ತಂಗಡಿ ಬಸ್ ನಿಲ್ದಾಣದ ಸಮೀಪ ಪ್ರತಿಭಟನೆ ನಡೆಯಿತು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮಾತನಾಡಿ, ‘ಕೇಂದ್ರ ಸರ್ಕಾರ ಬೆಲೆ ಏರಿಕೆ ಮೂಲಕ ಸಾಮಾನ್ಯ ಜನರ ಬದುಕಿನ ಜೊತೆ ಚೆಲ್ಲಾಟವಾಡುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯಿಂದ ಲಕ್ಷಾಂತರ ವಿದ್ಯಾರ್ಥಿಗಳ ಕನಸನ್ನು ಹುಸಿ ಮಾಡಿದೆ. ವಿದೇಶಾಂಗ ನೀತಿ ವೈಫಲ್ಯದಿಂದಾಗಿ ಉದ್ಯೋಗ ಸೃಷ್ಟಿ ಆಗುತ್ತಿಲ್ಲ. ಉದ್ಯೋಗದಲ್ಲಿರುವವರು ಉದ್ಯೋಗ ಕಳೆದುಕೊಳ್ಳುತ್ತಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪೆಟ್ರೋಲ್, ಡೀಸೆಲ್ ಹಾಗೂ ದಿನಬಳಕೆಯ ಗ್ಯಾಸ್ ಬೆಲೆ ಏರಿಸಿದ ಮತ್ತು ನೀಟ್ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಗೆ ಕಾರಣವಾದ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಲಾಯಿತು. ಬಳಿಕ ರಸ್ತೆ ತಡೆದು ಪ್ರತಿಭಟನೆ ಮಾಡಲಾಯಿತು.

ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸತೀಶ್ ಕಾಶಿಪಟ್ಣ, ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ, ಜಿಲ್ಲಾ ಕೆಡಿಪಿ ಸದಸ್ಯ ಸಂತೋಷ್ ಕುಮಾರ್ ಲಾಯಿಲ, ಕೇಶವ ಪಿ. ಬೆಳಾಲು, ರಾಜ್ಯ ಅಲ್ಪಸಂಖ್ಯಾತ ಘಟಕದ ಪ್ರವೀಣ್ ಹಳ್ಳಿಮನೆ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಹಕೀಮ್ ಕೊಕ್ಕಡ, ಬೆಳ್ತಂಗಡಿ ಬ್ಲಾಕ್ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಅಝರ್ ನಾವೂರು, ಅಶ್ರಫ್, ಗ್ಯಾರಂಟಿ ಸಮಿತಿ ಅಧ್ಯಕ್ಷ ಪದ್ಮನಾಭ ಸಾಲಿಯಾನ್, ಮಹಿಳಾ ಘಟಕದ ಅಧ್ಯಕ್ಷೆ ನಮಿತಾ, ಜೀನತ್, ಶೋಭಾ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-29-1621164803

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.