ಗುರುವಾರ, 22 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳ್ತಂಗಡಿ | ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಕೃಷ್ಣಪ್ಪ ಪೂಜಾರಿ ಆಯ್ಕೆ

Published 25 ನವೆಂಬರ್ 2023, 15:40 IST
Last Updated 25 ನವೆಂಬರ್ 2023, 15:40 IST
ಅಕ್ಷರ ಗಾತ್ರ

ಬೆಳ್ತಂಗಡಿ: ಡಿಸೆಂಬರ್ 17ರಂದು ಬೆಳ್ತಂಗಡಿ ವಾಣಿ ಕಾಲೇಜಿನ ಆವರಣದಲ್ಲಿ ನಡೆಯುವ ತಾಲ್ಲೂಕು 18ನೇ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಎ.ಕೃಷ್ಣಪ್ಪ ಪೂಜಾರಿ ಆಯ್ಕೆಯಾಗಿದ್ದಾರೆ.

ಕಡಬ ತಾಲ್ಲೂಕಿನ ಅಲಂಕಾರು ಎಂ.ತಿಮ್ಮಪ್ಪ ಪೂಜಾರಿ ಮತ್ತು ಮುತ್ತಕ್ಕ ಅವರ ಪುತ್ರನಾಗಿ 1947ರಂದು ಜನಿಸಿದ ಕೃಷ್ಣಪ್ಪ ಪೂಜಾರಿ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದರು. ರಾಜಕೀಯ ವಿಜ್ಞಾನ ವಿಷಯದಲ್ಲಿ ಎಂ.ಎ.ಸ್ನಾತಕೋತರ ಪದವಿ ಹಾಗೂ ಬಿ.ಇಡಿ ಪದವಿ ಗಳಿಸಿರುವ ಅವರು ಸರ್ಕಾರಿ ಪ್ರಾಥಮಿಕ ಶಾಲೆ, ಸರ್ಕಾರಿ ಪ್ರೌಢಶಾಲೆ  ಹಾಗೂ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಸೇವೆ ಸಲ್ಲಿಸಿದ ನಂತರ ಬೆಳ್ತಂಗಡಿ ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ 13 ವರ್ಷ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ್ದಾರೆ.

500ಕ್ಕೂ ಮಿಕ್ಕಿ ಶೈಕ್ಷಣಿಕ ಕಾರ್ಯಾಗಾರ, ಉಪನ್ಯಾಸ ಹಾಗೂ ಧಾರ್ಮಿಕ ಉಪನ್ಯಾಸ ನೀಡಿದ್ದಾರೆ. ಸ್ಮರಣ ಸಂಚಿಕೆಗಳ ಸಂಪಾದಕರಾಗಿ, ಲೇಖಕರಾಗಿ ಕಾರ್ಯನಿರ್ವಹಿಸಿದ್ದಾರೆ. ನಾಟಕಗಳಲ್ಲಿ ಅಭಿನಯಿಸಿ ನಿರ್ದೇಶನ ಮಾಡಿದ್ದಾರೆ. ಯಕ್ಷಗಾನ ತಾಳಮದ್ದಲೆಗಳಲ್ಲಿ ಅರ್ಥಧಾರಿಯಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT