ಶುಕ್ರವಾರ, 22 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯ ಕುಟುಂಬಗಳಿಗೆ ವಿದ್ಯುತ್‌: ಅರಣ್ಯ ಸಚಿವರಿಗೆ ಮನವಿ

Published 28 ಜೂನ್ 2023, 14:20 IST
Last Updated 28 ಜೂನ್ 2023, 14:20 IST
ಅಕ್ಷರ ಗಾತ್ರ

ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯಲ್ಲಿ ಬರುವ ಬೆಳ್ತಂಗಡಿ ತಾಲ್ಲೂಕಿನ ಸುಲ್ಕೇರಿಮೊಗ್ರು, ಗ್ರಾಮದ ಬಲ್ಯ ಮಾಳಿಗೆಬೈಲು ಸೇರಿದಂತೆ ಉದ್ಯಾನದ ವ್ಯಾಪ್ತಿಯಲ್ಲಿ ವಾಸಿಸುವ ಕುಟುಂಬಗಳಿಗೆ ವಿದ್ಯುತ್‌ ಸಂಪರ್ಕಕ್ಕೆ ಅನುಮತಿ ನೀಡುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮನವಿ ಸಲ್ಲಿಸಿದರು.

ಕುದುರೆಮುಖ ರಾಷ್ಟ್ರೀಯ ಉದ್ಯಾನದ ವ್ಯಾಪ್ತಿಗೆ ಈ ಭಾಗದ ಕೆಲ ಪ್ರದೇಶಗಳು ಸೇರಿರುವುದರಿಂದ ಅರಣ್ಯ ಇಲಾಖೆ ಸೇರಿದಂತೆ ಕೆಲವೊಂದು ಪ್ರಮುಖ ಇಲಾಖೆಗಳಿಂದ ಅನುಮತಿ ಸಿಗುವುದು ಕಷ್ಟವಾಗಿದ್ದು, ಈ ಭಾಗದ ವಿದ್ಯುತ್‌ ಸಂಪರ್ಕಕ್ಕೆ ಅಡ್ಡಿಯಾಗಿದೆ ಎಂದು ಅವರು ಸಚಿವರಿಗೆ ಮನವರಿಕೆ  ಮಾಡಿದರು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಶೇಖರ್ ಕುಕ್ಕೇಡಿ, ಕಾಂಗ್ರೆಸ್ ಎಸ್‌ಸಿ ಘಟಕದ ಜಿಲ್ಲಾ ಸಮಿತಿಯ ಸದಸ್ಯ ಗಣೇಶ್ ಪ್ರಸಾದ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT