ಗುರುವಾರ, 23 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ

Published 8 ಮೇ 2024, 12:34 IST
Last Updated 8 ಮೇ 2024, 12:34 IST
ಅಕ್ಷರ ಗಾತ್ರ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಐದು ಬಾರಿ ಶಾಸಕರಾಗಿದ್ದ ಕೆ.ವಸಂತ ಬಂಗೇರ (79ವ) ಮೇ 8ರಂದು ಸಂಜೆ 4 ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.

ಕೇದೆ ಸುಬ್ಬ ಪೂಜಾರಿ - ದೇವಕಿ ದಂಪತಿಯ ಪ್ರಥಮ ಪುತ್ರನಾಗಿ 1946ರ ಜನವರಿ 15ರಂದು ಜನಿಸಿದ್ದರು. ಅವರ ಆರೋಗ್ಯ ಈಚೆಗೆ ತೀವ್ರವಾಗಿ ಹದಗೆಟ್ಟಿದ್ದು, ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇದೀಗ ಅವರು ಕೊನೆಯುಸಿರೆಳೆದಿದ್ದು, ಮೇ 9ರಂದು ಮುಂಜಾನೆ ಪಾರ್ಥಿವ ಶರೀರ ಬೆಳ್ತಂಗಡಿಗೆ ಆಗಮಿಸಲಿದೆ. ನಂತರ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.

ಇವರಿಗೆ ಪತ್ನಿ ಸುಜಿತಾ ವಿ ಬಂಗೇರ, ಪುತ್ರಿಯರಾದ ಪ್ರೀತಿತಾ ಹಾಗೂ ಬಿನುತಾ, ಅಳಿಯಂದಿರಾದ ಧರ್ಮ ವಿಜೇತ್ ಹಾಗೂ ಸಂಜೀವ್ ಕಣೇಕಲ್ ಹಾಗೂ ಮೊಮ್ಮಕ್ಕಳು ಇದ್ದಾರೆ.

ಬಿಜೆಪಿ, ಜನತಾದಳ ಹಾಗೂ ಕಾಂಗ್ರೆಸ್ ಮೂರೂ ಪಕ್ಷಗಳಿಂದ ಸ್ಪರ್ಧಿಸಿ ಗೆದ್ದು ಶಾಸಕರಾದ ಹೆಗ್ಗಳಿಕೆ ಅವರದು. 1983 ಮತ್ತು 1985ರಲ್ಲಿ ಬಿಜೆಪಿಯಿಂದ, 1994ರಲ್ಲಿ ಜನತಾದಳದಿಂದ, 2008 ಮತ್ತು 2013ರಲ್ಲಿ ಕಾಂಗ್ರೆಸ್ ನಿಂದ ಗೆದ್ದಿದ್ದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT