ಬೆಳ್ತಂಗಡಿ: ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀಕ್ಷೇತ್ರ ಗೆಜ್ಜೆಗಿರಿಯಲ್ಲಿ ಫೆ.25ರಿಂದ ಮಾರ್ಚ್ 1ರ ತನಕ ವಾರ್ಷಿಕ ಜಾತ್ರಾ ಮಹೋತ್ಸವ ನಡೆಯಲಿದೆ.

ಕ್ಷೇತ್ರ ಗೆಜ್ಜೆಗಿರಿಯ ಬೆಳ್ತಂಗಡಿ ತಾಲ್ಲೂಕಿನ ಭಕ್ತಾಭಿಮಾನಿಗಳ ಸಮಾಲೋಚನಾ ಸಭೆ ಬೆಳ್ತಂಗಡಿ ಗುರುನಾರಾಯಣ ಸೇವಾ ಸಂಘದ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ಜಯ ವಿಕ್ರಮ್ ಕಲ್ಲಾಪು ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಶ್ರೀಕ್ಷೇತ್ರ ಗೆಜ್ಜೆಗಿರಿ ಮೂಲಸ್ಥಾನ ಅಭಿವೃದ್ಧಿ ಟ್ರಸ್ಟಿನ ಅಧ್ಯಕ್ಷ ಸಂಜೀವ ಪೂಜಾರಿ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿ, ಕ್ಷೇತ್ರದಲ್ಲಿ ಆಗಲಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ತಿಳಿಸಿ ತಾಲ್ಲೂಕಿನ ಭಕ್ತಾಭಿಮಾನಿಗಳ ಶ್ರೀ ಕ್ಷೇತ್ರಕ್ಕೆ ಬಂದು ಜಾತ್ರಾ ಮಹೋತ್ಸವವನ್ನು ಯಶಸ್ವಿಗೊಳಿಸಬೇಕು’ ಎಂದರು.

ಶ್ರೀಕ್ಷೇತ್ರ ಗೆಜ್ಜೆಗಿರಿಯ ಆಡಳಿತ ಸಮಿತಿ ಗೌರವಾಧ್ಯಕ್ಷ ಪೀತಾಂಬರ ಹೆರಾಜೆ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕ್ಷೇತ್ರದ ಟ್ರಸ್ಟಿ ಸುಜಿತಾ ವಿ ಬಂಗೇರ, ಸಂಘದ ಉಪಾಧ್ಯಕ್ಷ ಸುಂದರ ಪೂಜಾರಿ, ಪ್ರಧಾನ ಕಾರ್ಯದರ್ಶಿ ನಿತೀಶ್ ಎಚ್, ಯುವವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷ ಗುರುರಾಜ್ ಗುರಿಪಳ್ಳ, ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆ ಸುಮತಿ ಪ್ರಮೋದ್, ಗೆಜ್ಜೆಗಿರಿ ಕ್ಷೇತ್ರಾಡಳಿತ ತಾಲ್ಲೂಕು ಸಮಿತಿ ಮಹಿಳಾ ವಿಭಾಗದ ಕಾರ್ಯದರ್ಶಿ ರಾಜಶ್ರೀ ರಮಣ್, ಕ್ಷೇತ್ರದ ಟ್ರಸ್ಟಿ ನಾರಾಯಣ ಮಚ್ಚಿನ, ಸಂಘದ ನಿರ್ದೇಶಕರಾದ ಸಂತೋಷ್ ಉಪ್ಪಾರ್, ಉಷಾ ಶರತ್ ಬಾರ್ಯ, ಗೋಪಾಲ ಪೂಜಾರಿ ಕೋಲಾಜೆ, ವಿಶ್ವನಾಥ್ ಪೂಜಾರಿ ದಡ್ಡಲ್ ಪಲ್ಕೆ, ಸಂತೋಷ್ ಕೆ.ಸಿ.ಫುದುವೆಟ್ಟು, ನಾರಾಯಣ ಪೂಜಾರಿ ಉಚ್ಚೂರು ಮರೋಡಿ, ಜಯ ಪೂಜಾರಿ ನಡ, ಬಿ ಕಮಲಾಕ್ಷ ಕೋಟ್ಯಾನ್ ಬೆಳ್ತಂಗಡಿ, ಬಳಂಜ ಬಿಲ್ಲವ ಸಂಘದ ಅಧ್ಯಕ್ಷ ಸಂತೋಷ್ ಕೋಟ್ಯಾನ್, ಭಾಸ್ಕರ್ ವಿ ಎ ಬೆಳ್ತಂಗಡಿ ಪಾಲ್ಗೊಂಡಿದ್ದರು.

ಕ್ಷೇತ್ರ ಗೆಜ್ಜೆಗಿರಿ ಯಕ್ಷಗಾನ ಮೇಳದ ಸಂಚಾಲಕ ನಿತ್ಯಾನಂದ ನಾವರ ನಿರೂಪಿಸಿದರು. ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಎಂ.ಕೆ ಪ್ರಸಾದ್ ಶಿರ್ಲಾಲ್ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.