ಬೆಳ್ತಂಗಡಿ: ರಾಜ್ಯ ಸರ್ಕಾರದ ಆದೇಶದಂತೆ ರಾಜ್ಯದ ಎಲ್ಲ ಕಡೆ ವ್ಯಾಪಾರ, ವ್ಯವಹಾರ ಮಳಿಗೆಗಳಲ್ಲಿ ಅಳವಡಿಸುವ ನಾಮಫಲಕಗಳಲ್ಲಿ ಶೇ 60ರಷ್ಟು ಕನ್ನಡ ಬರಹ ಇರಬೇಕಾಗಿದ್ದು, ಈ ಆದೇಶದ ಅನುಷ್ಠಾನಕ್ಕೆ ಆಡಳಿತ ವ್ಯವಸ್ಥೆಯನ್ನು ಸ್ಥಳೀಯವಾಗಿ ಸಜ್ಜುಗೊಳಿಸಲು ಬೆಳ್ತಂಗಡಿ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲ್ಲೂಕಿನ ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳ ಸಭೆಯಲ್ಲಿ ಮಾಹಿತಿ ನೀಡಲಾಯಿತು.

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯ ದೇವಿಪ್ರಸಾದ್ ಮಾಹಿತಿ ನೀಡಿದರು.

ಬೆಳ್ತಂಗಡಿ ತಾಲ್ಲೂಕಿನಲ್ಲಿ ಎಲ್ಲ ಕಡೆ ಕನ್ನಡ ನಾಮಫಲಕಗಳ ಕಡ್ಡಾಯ ಅಳವಡಿಕೆಗೆ ಎಲ್ಲ ಪಿಡಿಒಗಳ ಸಹಕಾರ ಅಗತ್ಯ. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಈ ವಿಚಾರವಾಗಿ ಜಾಗೃತಿ ಮೂಡಿಸಲು ಕ್ರಮ ಕೈಗೊಳ್ಳಬೇಕಾಗಿದೆ. ಮುಂದಿನ ದಿನಗಳಲ್ಲಿ ಅಗತ್ಯ ಇರುವ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವ್ಯಾಪಾರಸ್ಥರಿಗೆ ನಾಮಫಲಕಗಳಲ್ಲಿ ಕನ್ನಡ ಭಾಷೆ ಅಳವಡಿಕೆ ಬಗ್ಗೆ ಜಾಗೃತಿ ಮೂಡಿಸಲು ಅಧಿಕಾರಿಗಳ ಜತೆ ಬರಲು ಸಿದ್ಧ. ದೈನಂದಿನ ವ್ಯವಹಾರದಲ್ಲಿ ಕನ್ನಡ ಬಳಸಲು ಪ್ರಯತ್ನ ಅಗತ್ಯ ಎಂದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್ ಸ್ವಾಗತಿಸಿ, ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-29-23967973

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.