ಬೆಳ್ತಂಗಡಿ: ತಾಲ್ಲೂಕಿನ ಮಲವಂತಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುದುರೆಮುಖ ರಾಷ್ಟ್ರೀಯ ಉದ್ಯಾನದಲ್ಲಿ ವಾಸವಾಗಿರುವ 9 ಕುಟುಂಬಗಳ ಪುನರ್ವಸತಿಗೆ ಅಂದಾಜು ಮೊತ್ತ ₹ 10 ಕೋಟಿ ಅನುದಾನವನ್ನು ಮಂಜೂರುಗೊಳಿಸುವಂತೆ ಕೆಪಿಸಿಸಿ ಪ್ರಧಾನ ಕಾರ್ಯ ದರ್ಶಿ ರಕ್ಷಿತ್ ಶಿವರಾಂ ನೇತೃತ್ವದ ನಿಯೋಗವು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.

ಇಲ್ಲಿನ 9 ಕುಟುಂಬಗಳು ಸ್ವಯಂ ಪ್ರೇರಿತ ಪುನರ್ವಸತಿಗೆ ಒಲವು ತೋರಿದ್ದು, ಈಗಾಗಲೇ ಕಡತ ಸಿದ್ಧಪಡಿಸಿ ಅಂದಾಜು ಮೊತ್ತವನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಮಕ್ಷಮದಲ್ಲಿ ಮುಕ್ತಾಯದ ಹಂತಕ್ಕೆ ಬಂದಿದೆ. ಈ ಬಗ್ಗೆ ಸ್ವಯಂ ಪ್ರೇರಿತ ಪುನರ್ವಸತಿಗೆ ಒಲವು ಹೊಂದಿರುವ ಕುಟುಂಬಗಳ ಸದಸ್ಯರು ಸಚಿವರನ್ನು ಭೇಟಿ ಮಾಡಿದರು. ಮನವಿಗೆ ಸಚಿವರು ಪೂರಕವಾಗಿ ಸ್ಪಂದಿಸಿದ್ದಾರೆ ಎಂದು ರಕ್ಷಿತ್ ಶಿವರಾಂ ತಿಳಿಸಿದ್ದಾರೆ.

ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಅಧ್ಯಕ್ಷೆ ಶಾಲೆಟ್ ಪಿಂಟೊ, ಮಲವಂತಿಗೆ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಕೆ. ಯು. ಮೊಹಮ್ಮದ್, ಫಲಾನುಭವಿ ಗಳಾದ ಸಂತೋಷ್ ಗೌಡ, ನಾರಾಯಣ ಮಲೆ ಕುಡಿಯ, ಬಾಲಕೃಷ್ಣ ಮಲೆಕುಡಿಯ, ಹರೀಶ್ ಮಲೆಕುಡಿಯ, ಪುರಂದರ ಗೌಡ ಜತೆಗಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260510-126-1910997074

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.