ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಲಂಪುರಿ ಮಹಾಗಣಪತಿ ದೇಗುಲದ ಬ್ರಹ್ಮಕಲಶ: ಧಾರ್ಮಿಕ ಸಭೆ

Last Updated 27 ಡಿಸೆಂಬರ್ 2022, 5:21 IST
ಅಕ್ಷರ ಗಾತ್ರ

ಬೆಳ್ತಂಗಡಿ: ‘ಪುರಾತನ ದೇಗುಲಗಳ ಜೀರ್ಣೋದ್ಧಾರ ಕಾರ್ಯದಲ್ಲಿ ಪಾಲ್ಗೊಳ್ಳುವುದರಿಂದ ನಮ್ಮ ಪಾಪಗಳು ಪರಿಹಾರವಾಗುತ್ತದೆ. ಪ್ರಕೃತಿಯ ಜೊತೆ ಜೀವನ ಸಾಗಿಸಬೇಕೇ ಹೊರತು ಪ್ರಕೃತಿಯ ವಿರುದ್ಧ ಸಲ್ಲದು. ಪ್ರಕೃತಿಯ ವಿರುದ್ಧ ನಮ್ಮ ಜೀವನ ಸಾಗಿದರೆ ಪರಶುರಾಮ ಸೃಷ್ಟಿಯ ಭೂಮಿಯೂ ಉಳಿಯದು’ ಎಂದು ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಕಶೆಕೋಡಿ ಸೂರ್ಯನಾರಾಯಣ ಭಟ್ ಹೇಳಿದರು.

ಕರಿಮಣೇಲು ಕ್ಷೇತ್ರ ದೇಲಂಪುರಿ ಮಹಾದೇವ ಮಹಾಗಣಪತಿ ದೇವಸ್ಥಾನದ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಎರಡನೇ ದಿನದ ಧಾರ್ಮಿಕ ಸಭೆಯಲ್ಲಿ ಧಾರ್ಮಿಕ ಪ್ರವಚನ ನೀಡಿದರು.

ದೇವರು ಗಾಳಿಯಂತೆ ಎಲ್ಲೆಡೆಯೂ ಇರುತ್ತಾರೆ. ಆದರೆ, ಧಾರ್ಮಿಕತೆಯ ಭಾವನೆ ಉದ್ದೀಪನಗೊಳ್ಳಲು ದೇಗುಲಗಳು ಬೇಕು. ದೇಗುಲ ಪುನರ್ ನಿರ್ಮಾಣ ಸಮಾಜವನ್ನು ಕಟ್ಟುವ ಕಾಯಕವಾಗಿದೆ ಎಂದರು.

ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಸುಕೀರ್ತಿರಾಜ ಅಜ್ರಿ ಅಧ್ಯಕ್ಷತೆ ವಹಿಸಿದ್ದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಯಶವಂತ ಎಸ್, ಹೊಸಂಗಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಕರುಣಾಕರ ಪೂಜಾರಿ, ವೇಣೂರು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ ಎ. ಜಯರಾಮ್ ಶೆಟ್ಟಿ, ಮಂಗಳೂರಿನ ಉದ್ಯಮಿ ಆನಂದ ಶೆಟ್ಟಿ, ದೇಲಂಪುರಿ ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಶ್ರೀಕೃಷ್ಣ ಕೆ. ಇದ್ದರು.

ಬ್ರಹ್ಮಕಲಶ ಸಮಿತಿಯ ಕಾರ್ಯಾಧ್ಯಕ್ಷ ಬಾಲಕೃಷ್ಣ ಭಟ್ ದಡ್ಡು ಸ್ವಾಗತಿಸಿದರು.

ದೇಗುಲ ಪುನರ್ ನಿರ್ಮಾಣಕ್ಕೆ ಸಹಕಾರ ನೀಡಿದ ಬಿ.ಸಿ.ರೋಡ್ ಸೋಮಯಾಜಿ ವುಡ್ ವರ್ಕ್ಸ್‌ನ ಪ್ರಕಾಶ್ ಸೋಮಯಾಜಿ ಹಾಗೂ ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ಮಹೇಶ್ ಭಟ್ ಮಿಯಂದೂರು ಅವರನ್ನು ಸನ್ಮಾನಿಸಲಾಯಿತು. ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ ಉಜಿರ್ದಡ್ಡ ಸನ್ಮಾನಪತ್ರ ವಾಚಿಸಿದರು.

ಮಹಾವೀರ ಜೈನ್ ಮೂಡುಕೋಡಿಗುತ್ತು ನಿರೂಪಿಸಿದರು. ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಜಗದೀಶ್ ನಾಯಕ್ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT