ಬೆಳ್ತಂಗಡಿ (ದಕ್ಷಿಣ ಕನ್ನಡ): ಬಂಧಿಸಲು ಬಂದ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರು ವಿಚಾರಣೆಗಾಗಿ ಶುಕ್ರವಾರ ಬೆಳ್ತಂಗಡಿ ಠಾಣೆಗೆ ಹಾಜರಾದರು.

ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂಬ ಆರೋಪದ ಮೇಲೆ ಉಡುಪಿ ಜಿಲ್ಲೆಯ ಬ್ರಹ್ಮಾವರ ಠಾಣೆ ಪೊಲೀಸರು ಮಹೇಶ್ ಶೆಟ್ಟಿ ಅವರನ್ನು ಬಂಧಿಸಲು ಆ.21ರಂದು ತಿಮರೋಡಿಗೆ ಬಂದಿದ್ದ ವೇಳೆ ಕರ್ತವ್ಯಕ್ಕೆ ಅಡ್ಡಿಪಡಿಸಲಾಗಿತ್ತು ಎಂದು ದೂರಿ ಹಲವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಮಹೇಶ್ ಶೆಟ್ಟಿ ಈ ಪ್ರಕರಣದ ಮೂರನೇ ಆರೋಪಿ.

ಶುಕ್ರವಾರ ಬೆಳಿಗ್ಗೆ ಠಾಣೆಗೆ ಹಾಜರಾದ ಮಹೇಶ್ ಶೆಟ್ಟಿ ಅವರ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವಿಗೆ ಸಂಬಂಧಿಸಿದ ಶವಗಳನ್ನು ಹೂತು ಹಾಕಿರುವುದಾಗಿ ಹೇಳಿರುವ ವ್ಯಕ್ತಿಗೆ ಆಶ್ರಯ ನೀಡಿದ್ದಾರೆ ಎಂಬ ಆರೋಪದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಅವರು ಎಸ್ಐಟಿ ಠಾಣೆಗೂ ಶುಕ್ರವಾರ ಹಾಜರಾಗಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ಹಾಜರಾಗುವಂತೆ ತಿಮರೋಡಿ ಅವರಿಗೆ ಎಸ್ಐಟಿ ನೋಟಿಸ್ ನೀಡಿತ್ತು. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ವಿಚಾರಣೆ ಮುಗಿದ ನಂತರ ಅವರು ಎಸ್ಐಟಿ ಕಚೇರಿಗೆ ಹಾಜರಾದರು ಎಂದು ತಿಳಿದು ಬಂದಿದೆ.
.ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪ: ತಿಮರೋಡಿ ಬೆಂಬಲಿಗರ ಬಂಧನ.ಧರ್ಮಸ್ಥಳ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ ತೆರಳಿದ ಎಸ್ಐಟಿ ಅಧಿಕಾರಿಗಳು.

ಮೊಹಾಂತಿ ಬೆಳ್ತಂಗಡಿಗೆ

ಎಸ್ಐಟಿ ಮುಖ್ಯಸ್ಥ ಪ್ರಣವ್ ಮೊಹಾಂತಿ ಅವರು ಬೆಳ್ತಂಗಡಿಗೆ ಬಂದಿದ್ದಾರೆ. ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ಅವರು ರಜೆಯಲ್ಲಿ ತೆರಳಿರುವ ಕಾರಣ ಮೊಹಾಂತಿ ಅವರು ವಿಚಾರಣೆ ಪ್ರಕ್ರಿಯೆಯಲ್ಲಿ ನೇರವಾಗಿ ಪಾಲ್ಗೊಳ್ಳಲಿದ್ದಾರೆ. ಇದಕ್ಕಾಗಿ ಅವರು ಎಸ್ಐಟಿ ಕಚೇರಿಯಲ್ಲೇ ಬೀಡುಬಿಟ್ಟಿದ್ದಾರೆ ಎನ್ನಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.