ಬೆಳ್ತಂಗಡಿ: ‘ಮರೋಡಿ ಗ್ರಾಮದ ಪೊಸರಡ್ಕ ಶ್ರೀದೈವ, ಶ್ರೀಕೊಡಮಣಿತ್ತಾಯ, ಶ್ರೀವ್ಯಾಘ್ರ ಚಾಮುಂಡಿ ದೈವಸ್ಥಾನ ಹಾಗೂ ಬ್ರಹ್ಮ ಬೈದರ್ಕಳ ಗರಡಿಯ ಪುನರ್ ಪ್ರತಿಷ್ಠೆ, ಬ್ರಹ್ಮ ಕುಂಭಾಭಿಷೇಕ ಹಾಗೂ ನೇಮೋತ್ಸವ ಉದಯ ಪಾಂಗಣ್ಣಾಯ ಹಾಗೂ ಕೇಳ ಅನಂತ ಆಸ್ರಣ್ಣರ ನೇತೃತ್ವದಲ್ಲಿ ಏ.28ರಿಂದ ಮೇ 1ರವರೆಗೆ ನಡೆಯಲಿದೆ’ ಎಂದು ಬ್ರಹ್ಮಕುಂಬಾಭಿಷೇಕ ಸಮಿತಿ ಅಧ್ಯಕ್ಷ ರಕ್ಷಿತ್ ಶಿವರಾಂ ಹೇಳಿದರು.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಮಾರು ₹ 1.50 ಕೋಟಿ ವೆಚ್ಚದಲ್ಲಿ ಆಲಯ ಹಾಗೂ ಬ್ರಹ್ಮ ಬೈದರ್ಕಳ ಗರಡಿ ನಿರ್ಮಿಸಲಾಗಿದೆ. ಏ.28ರಂದು ಬೆಳಿಗ್ಗೆ 8.30ರಿಂದ ಬ್ರಹ್ಮ ಕುಂಭಾಭಿಷೇಕದ ಧಾರ್ಮಿಕ ವಿಧಿಗಳು ಆರಂಭವಾಗಲಿದ್ದು, ಸಂಜೆ 4 ಗಂಟೆಗೆ ಮರೋಡಿ ಉಮಾಮಹೇಶ್ವರ ದೇವಸ್ಥಾನದ ಬಳಿಯಿಂದ ಹಸಿರುವಾಣಿ ಹೊರೆಕಾಣಿಕೆಯ ಶೋಭಯಾತ್ರೆ ನಡೆಯಲಿದೆ.

ಸಂಜೆ 6.30ರಿಂದ ಕುಣಿತ ಭಜನೆ, 7.30ಕ್ಕೆ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಳದಂಗಡಿ ಅರಮನೆಯ ತಿಮಣ್ಣರಸ ಡಾ. ಪದ್ಮಪ್ರಸಾದ ಅಜಿಲ ವಹಿಸಲಿದ್ದಾರೆ. ಶಾಸಕ ಹರೀಶ್ ಪೂಂಜ ಧಾರ್ಮಿಕ ಸಭೆ ಉದ್ಘಾಟಿಸಲಿದ್ದು, ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್ ಭಾಗವಹಿಸಲಿದ್ದಾರೆ. ರಾತ್ರಿ 10ರಿಂದ ನಾಟಕ ನಡೆಯಲಿದೆ.

29ರಂದು ಬೆಳಿಗ್ಗೆ 7.30ರಿಂದ ವೈದಿಕ ಕಾರ್ಯಕ್ರಮಗಳು, 10.27ಕ್ಕೆ ದೈವಗಳ ಹಾಗೂ ಬ್ರಹ್ಮ ಬೈದರ್ಕಳ ಮಂಚ ಪ್ರತಿಷ್ಠಾಪನೆ, ಭಜನಾ ಕಾರ್ಯಕ್ರಮ, ಸಂಗೀತ ರಸಮಂಜರಿ, ಸಂಜೆ 6ರಿಂದ ಸಾಂಸ್ಕೃತಿಕ ಕಾರ್ಯಕ್ರಮ, 7.30ಕ್ಕೆ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆಡಳಿತ ಸಮಿತಿ ಅಧ್ಯಕ್ಷ ಜಯವರ್ಮ ಬುಣ್ಣು ವಹಿಸಲಿದ್ದಾರೆ. ಸಂಸದ ಕ್ಯಾ. ಬ್ರಿಜೇಶ್ ಚೌಟ ಸಭೆಯನ್ನು ಉದ್ಘಾಟಿಸಲಿದ್ದು, ಅಳದಂಗಡಿ ಸತ್ಯದೇವತಾ ದೈವಸ್ಥಾನದ ಆಡಳಿತದಾರ ಶಿವಪ್ರಸಾದ್ ಅಜಿಲ ಭಾಗವಹಿಸಲಿದ್ದಾರೆ. ರಾತ್ರಿ ಗಂಟೆ 10ರಿಂದ ನಾಟಕ ನಡೆಯಲಿದೆ.

30ರಂದು ಬೆಳಿಗ್ಗೆ 7ರಿಂದ ಧಾರ್ಮಿಕ ಕಾರ್ಯಕ್ರಮಗಳು, 9ಕ್ಕೆ ಬ್ರಹ್ಮಕುಂಭಾಭಿಷೇಕ ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮ, ಸಂಜೆ 4.30ಕ್ಕೆ ದೈವಗಳ ಭಂಡಾರ ಬಂದು 7.30 ರಿಂದ ಶ್ರೀದೈವ, ಕೊಡಮಣಿತ್ತಾಯ, ವ್ಯಾಘ್ರ ಚಾಮುಂಡಿ ದೈವಗಳ ನೇಮೋತ್ಸವ ನಡೆಯಲಿದೆ. ಧಾರ್ಮಿಕ ಸಭೆಯ ಅಧ್ಯಕ್ಷತೆಯನ್ನು ಆಡಳಿತ ಸಮಿತಿ ಗೌರವಾಧ್ಯಕ್ಷ ಹೇಮರಾಜ್ ಕೆ. ಬೆಳ್ಳಿಬೀಡು ವಹಿಸಲಿದ್ದು, ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಮೋಹನ ಆಳ್ವ ಉದ್ಘಾಟಿಸಲಿದ್ದಾರೆ. ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಮುಖಂಡ ನಳಿನ್ ಕುಮಾರ್ ಕಟೀಲ್ ಭಾಗವಹಿಸಲಿದ್ದಾರೆ.

ಮೇ 1ರಂದು ಸಂಜೆ 5.30ರಿಂದ ಮೂಡುಬಿದಿರೆ ಆಳ್ವಾಸ್ ಧೀಂಕಿಟ ಯಕ್ಷಗಾನ ಅಧ್ಯಯನ ಕೇಂದ್ರದಿಂದ ಸಿಂಧೂರ ಸಂಗ್ರಾಮ ಕಾರ್ಯಕ್ರಮ ನಡೆಯಲಿದ್ದು, 7.30ಕ್ಕೆ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬ್ರಹ್ಮಕುಂಬಾಭಿಷೇಕ ಸಮಿತಿ ಅಧ್ಯಕ್ಷ ರಕ್ಷಿತ್ ಶಿವರಾಂ ವಹಿಸಲಿದ್ದಾರೆ. ಪಡ್ಯಾರಬೆಟ್ಟ ಕ್ಷೇತ್ರದ ಆನುವಂಶಿಕ ಮೊಕ್ತೇಸರ ಜೀವಂಧರ್ ಕುಮಾರ್ ಧಾರ್ಮಿಕ ಸಭೆ ಉದ್ಘಾಟಿಸಲಿದ್ದು, ಕೇಳ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಅನಂತ ಆಸ್ರಣ್ಣ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್ ಎಸ್. ಭಾಗವಹಿಸಲಿದ್ದಾರೆ. ರಾತ್ರಿ 10ರಿಂದ ಬ್ರಹ್ಮ ಬೈದರ್ಕಳ ಹಾಗೂ ರಾತ್ರಿ 1ರಿಂದ ಮಾಯಂದಾಲೆ ನೇಮೋತ್ಸವ ನಡೆಯಲಿದೆ ಎಂದು ತಿಳಿಸಿದರು.

ಮರೋಡಿ ಗ್ರಾಮದ ಸುಮಾರು 330 ಮನೆಗಳಿಗೆ ಕಲಶವನ್ನು ಉಚಿತವಾಗಿ ನೀಡಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು.

ಆಡಳಿತ ಸಮಿತಿ ಗೌರವಾಧ್ಯಕ್ಷ ಹೇಮರಾಜ ಕೆ. ಬೆಳ್ಳಿಬೀಡು, ರಾಜೇಂದ್ರ ಬಲ್ಲಾಳ್, ಅಧ್ಯಕ್ಷ ಜಯವರ್ಮ ಬುಣ್ಣು, ಪ್ರಧಾನ ಕಾರ್ಯದರ್ಶಿ ಆದಿತ್ಯ ಪಿ.ಕೆ., ಬ್ರಹ್ಮಕುಂಭಾಭಿಷೇಕ ಸಮಿತಿ ಕಾರ್ಯಾಧ್ಯಕ್ಷರಾದ ಎಂ.ಎಸ್. ಪೂಜಾರಿ, ನಾರಾಯಣ ಪೂಜಾರಿ ಉಚ್ಚೂರು, ಪ್ರಧಾನ ಕಾರ್ಯದರ್ಶಿ ಶೀತಲ್ ಕುಮಾರ್ ಜೈನ್, ಆಡಳಿತ ಸಮಿತಿ ಸದಸ್ಯ ಸುದರ್ಶನ್ ಜೈನ್ ಪಾಂಡಿಬೆಟ್ಟು ಗುತ್ತು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-29-2040488126

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.