ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿವೇಕ ಯೋಜನೆ ನಿಲ್ಲಿಸಿ ಅನ್ಯಾಯ: ಶಾಸಕ ಹರೀಶ ಪೂಂಜ

Published 4 ಮಾರ್ಚ್ 2024, 13:48 IST
Last Updated 4 ಮಾರ್ಚ್ 2024, 13:48 IST
ಅಕ್ಷರ ಗಾತ್ರ

ಬೆಳ್ತಂಗಡಿ: ‘ಈಗಿನ ರಾಜ್ಯ ಸರ್ಕಾರ ವಿವೇಕ ಕೊಠಡಿಗಳ ಯೋಜನೆಯನ್ನು ಸ್ಥಗಿತಗೊಳಿಸಿ ಶೈಕ್ಷಣಿಕ ವ್ಯವಸ್ಥೆಗೆ ಅನ್ಯಾಯ ಮಾಡುತ್ತಿದೆ’ ಎಂದು ಶಾಸಕ ಹರೀಶ ಪೂಂಜ ದೂರಿದರು.

ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಸೂಳಬೆಟ್ಟು ಇಲ್ಲಿ ₹ 27 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಪ್ರಾಥಮಿಕ ಶಾಲಾ ವಿಭಾಗದ ನೂತನ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು.

ಹಿಂದಿನ ಸರ್ಕಾರವು ವಿವೇಕ ಯೋಜನೆಗೆ ₹ 500 ಕೋಟಿ ಮೀಸಲಿರಿಸಿತ್ತು. ಇದರಿಂದ ವರ್ಷಕ್ಕೆ 10 ಕೊಠಡಿಗಳ ನಿರ್ಮಾಣ ಸಾಧ್ಯವಾಗುತ್ತಿತ್ತು. ಮುಂದಿನ 10 ವರ್ಷಗಳಲ್ಲಿ 400 ಕೊಠಡಿಗಳ ನಿರ್ಮಾಣಮಾಡುವ ಗುರಿ ಹೊಂದಲಾಗಿತ್ತು. ಈ ಯೋಜನೆ ಸಾಕಾರಗೊಂಡಿದ್ದರೆ ಗ್ರಾಮೀಣ ಪ್ರದೇಶದ ಶಾಲೆಗಳಿಗೆ ಕೊಠಡಿಗಳ ಕೊರತೆಯೇ ಉಂಟಾಗುತ್ತಿರಲಿಲ್ಲ ಎಂದರು.

ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಪ್ರಮೋದ್‌ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು.

ಪ್ರಮುಖರಾದ ಶಿವಪ್ರಸಾದ ಅಜಿಲ, ಬಾಲಕೃಷ್ಣ ಪೂಜಾರಿ, ಜಯ ಶೆಟ್ಟಿ, ಪ್ರವೀಣ್ ಬರಯ, ತಾರಕೇಸರಿ, ಚೇತನಾಕ್ಷಿ, ಕಿರಣ್‌ ಕುಮಾರ್‌, ಅನಂತ ಮರಾಠೆ, ಸಂದೇಶ್‌ ಮದ್ದಡ್ಕ, ಡಾ.ಶಶಿಧರ ಡೋಂಗ್ರೆ, ನಿರಂಜನ ಜೋಶಿ, ಪ್ರತೀಕ್ಷಾ ಭಾಗವಹಿಸಿದ್ದರು.

60 ವರ್ಷಗಳಲ್ಲಿ ಶಾಲೆಯಲ್ಲಿ ಅಧ್ಯಾಪಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಪ್ರೇಮಾವತಿ ಭಟ್‌, ಶ್ರೀವತ್ಸ ತಂತ್ರಿ, ದಿ.ನರಹರಿ ಮೆಹಂದಳೆ ಪರವಾಗಿ ಅವರ ಪುತ್ರ ಪ್ರವೀಣಚಂದ್ರ ಮೆಹಂದಳೆ, ದಿ.ಕಾಂತಪ್ಪ ಮೂಲ್ಯ ಪರವಾಗಿ ಅವರ ಪತ್ನಿ ಜಾನಕಿ, ಶಾಲೆಗೆ ಸ್ಥಳದಾನ ನೀಡಿದ ಅನಂತ ಮರಾಠೆ, ಶಾಲಾಭಿವೃದ್ಧಿ ಸಮಿತಿ ಮಾಜಿ ಅಧ್ಯಕ್ಷ ವಿಶ್ವನಾಥ ಡೋಂಗ್ರೆ ಸಮ್ಮಾನಿಸಲಾಯಿತು.

ನರಹರಿ ಜೋಶಿ ಸ್ಮರಣಾರ್ಥ ನಿರ್ಮಿಸಲಾದ ಧ್ವಜಕಟ್ಟೆಯನ್ನು ಹರೀಶ್ ಪೂಂಜ ಉದ್ಘಾಟಿಸಿದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್‌ ಶಿವರಾಂ ಭೇಟಿ ನೀಡಿದರು.

ಅಂಗನವಾಡಿ ಕಾರ್ಯಕರ್ತೆ ಶಕುಂತಲಾ, ಶಾಲಾ ಶಿಕ್ಷಕಿ ಸೌಮ್ಯಾ ವಾಚಿಸಿದರು. ಶಾಲಾ ಮುಖ್ಯಶಿಕ್ಷಕಿ ಲೀನಾ ಮೊರಾಸ್‌ ಸ್ವಾಗತಿಸಿದರು. ಚಂದ್ರಹಾಸ ಬಳಂಜ ಕಾರ್ಯಕ್ರಮ ನಿರ್ವಹಿಸಿದರು. ಸಹ ಶಿಕ್ಷಕಿ ಉಮೈಬಾ, ಅಕ್ಷರ ದಾಸೋಹ ಸಿಬ್ಬಂದಿ ಮಮತಾ, ಲವಿನಾ, ಚಿತ್ರಾಕ್ಷಿ, ಸಹಕರಿಸಿದರು.

ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT