ಬೆಳ್ತಂಗಡಿ: ‘ಸರ್ಕಾರಿ ಶಾಲೆಯನ್ನು ಕಡೆಗಣಿಸುವುದು ಸರಿಯಲ್ಲ. ಸರ್ಕಾರಿ ಶಾಲೆಗಳಲ್ಲಿ ಓದಿದವರೇ ಇಂದು ಗಣ್ಯವ್ಯಕ್ತಿಗಳಾಗಿದ್ದಾರೆ’ ಎಂದು ಮುಖ್ಯಮಂತ್ರಿಯ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ ಹೇಳಿದರು.

‘ಕುತ್ಲೂರು ಶಾಲೆಗೆ ಕೆಲ ದಿನಗಳಲ್ಲಿ ಮಿನಿ ಬಸ್ ನೀಡಲಿದ್ದೇನೆ. ಇಲ್ಲಿ ಆಂಗ್ಲ ಮಾಧ್ಯಮ ಕಲಿಕೆಗೆ ಸರ್ಕಾರದ ಮಟ್ಟದಲ್ಲಿ ಅನುಮತಿ ಕೊಡಿಸುತ್ತೇನೆ. ಈ ಶಾಲೆ ರಾಜ್ಯಕ್ಕೇ ಮಾದರಿಯಾಗಬೇಕು’ ಎಂದರು.

ತಾಲ್ಲೂಕಿನ ಕುತ್ಲೂರು ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ವಿವಿಧ ಕಾಮಗಾರಿ ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪರಿಕರ ವಿತರಿಸಿ ಅವರು ಮಾತನಾಡಿದರು.

ಎಸ್ಡಿಎಂಸಿ ಅಧ್ಯಕ್ಷ ರಾಮಚಂದ್ರ ಭಟ್ ಅಧ್ಯಕ್ಷತೆ ವಹಿಸಿದ್ದರು.

ಎಸ್ಕೆಡಿಆರ್ಡಿಪಿ ಸಿಇಒ ಅನಿಲ್ ಕುಮಾರ್, ಜಿಲ್ಲಾ ವಾರ್ತಾಧಿಕಾರಿ ಖಾದರ್ ಷಾ, ಬೆಸ್ಟ್ ಫೌಂಡೇಷನ್ ಅಧ್ಯಕ್ಷ ರಕ್ಷಿತ್ ಶಿವರಾಂ, ಎಂಆರ್ಪಿಎಲ್ನ ಸಿಎಸ್ಆರ್ ವಿಭಾಗದ ಪ್ರಬಂಧಕ ಹರೀಶ್, ಕಾಯರ್ ಬೋರ್ಡ್ ಅಧ್ಯಕ್ಷ ನಟರಾಜ್, ಸೇವಾ ಭಾರತಿ ಅಧ್ಯಕ್ಷ ವಿನಾಯಕ್ ರಾವ್, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಉಪಾಧ್ಯಕ್ಷ ಭಾಸ್ಕರ ರೈ, ಕೋಶಾಧಿಕಾರಿ ಪುಷ್ಪರಾಜ್, ಸದಸ್ಯ ರಾಜೇಶ್, ಮಂಗಳೂರು ಪ್ರೆಸ್ಕ್ಲಬ್ ಅಧ್ಯಕ್ಷ ಹರೀಶ್ ರೈ, ನಾರಾವಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಜರತ್ನ ಜೈನ್, ಎಸ್ಡಿಎಂಸಿ ಮಾಜಿ ಅಧ್ಯಕ್ಷ ಉಮಾಕಾಂತ ಅರಿಗ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ನಿಮಿತ್ ಜೈನ್, ಹಿರಿಯರಾದ ಡಾಕಯ್ಯ ಪೂಜಾರಿ, ಗುತ್ತಿಗೆದಾರ ವಿನಯಕುಮಾರ್, ಉಪಾಧ್ಯಕ್ಷೆ ಶ್ವೇತಾ ಭಾಗವಹಿಸಿದ್ದರು.

ಕಾಮಗಾರಿ ನಿರ್ವಹಿಸಿದವನ್ನು ಸನ್ಮಾನಿಸಲಾಯಿತು.

ಶಾಲಾ ಮುಖ್ಯ ಶಿಕ್ಷಕಿ ಜ್ಯೋತಿ ಸ್ವಾಗತಿಸಿದರು. ಶಿಕ್ಷಕಿ ರೂಪಾ ವಂದಿಸಿದರು. ಶಿಕ್ಷಕ ಅಜಿತ್ಕುಮಾರ್ ಕಾರ್ಯಕ್ರಮ ನಿರ್ವಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.