ಬೆಳ್ತಂಗಡಿ: ನಿಟ್ಟಡೆ ಗ್ರಾಮದ ಫಂಡಿಜೆ ವಾಳ್ಯದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ವಾಹನ ಸೌಲಭ್ಯ ಹಾಗೂ ಗುಣಮಟ್ಟದ ಶಿಕ್ಷಣದ ಪರಿಣಾಮವಾಗಿ ಈ ವರ್ಷ ವಿದ್ಯಾರ್ಥಿಗಳ ದಾಖಲಾತಿ ಗಣನೀಯವಾಗಿ ಹೆಚ್ಚಾಗಿದೆ ಎಂದು ಎಸ್ಡಿಎಂಸಿ ಅಧ್ಯಕ್ಷೆ ಸ್ವಾತಿ ಸಂತಸ ವ್ಯಕ್ತಪಡಿಸಿದರು.

ಶಾಲೆಯ ಪ್ರಾರಂಭೋತ್ಸವದಲ್ಲಿ ಮಾತನಾಡಿದ ಅವರು, ‘ಶಾಲೆಯ ಹಳೆ ವಿದ್ಯಾರ್ಥಿ ಸಂಘ, ಎಸ್ಡಿಎಂಸಿ ಹಾಗೂ ಶಿಕ್ಷಕರ ಶ್ರಮದಿಂದ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ, ಶಿಸ್ತುಬದ್ಧ ವಾತಾವರಣ ಮತ್ತು ವಿವಿಧ ಶೈಕ್ಷಣಿಕ ಚಟುವಟಿಕೆಗಳನ್ನು ಒದಗಿಸಲಾಗುತ್ತಿದೆ. ಜತೆಗೆ ಸ್ಪೋಕನ್ ಇಂಗ್ಲಿಷ್ ತರಗತಿಗಳಿರುವುದರಿಂದ ಪೋಷಕರಲ್ಲಿ ಸರ್ಕಾರಿ ಶಾಲೆಗಳ ಬಗ್ಗೆ ವಿಶ್ವಾಸ ಹೆಚ್ಚಾಗಿದೆ’ ಎಂದರು.

ಶಾಲಾ ಮುಖ್ಯಶಿಕ್ಷಕಿ ಫ್ಲೇವಿಯಾ ಡಿಸೋಜ ಮಾತನಾಡಿ, ‘ವಿಶೇಷವಾಗಿ ಶಾಲೆಯಿಂದ ದೂರವಿರುವ ವಿದ್ಯಾರ್ಥಿಗಳಿಗೆ ಉಚಿತ ವಾಹನ ಸೌಲಭ್ಯ ಕಲ್ಪಿಸಿರುವುದರಿಂದ ಶಾಲೆಗೆ ಬರುವುದು ಸುಲಭವಾಗಿದೆ. ಈ ಸೌಲಭ್ಯದಿಂದ ಅನೇಕ ಪೋಷಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಂದ ಸರ್ಕಾರಿ ಶಾಲೆಗೆ ವರ್ಗಾಯಿಸಿದ್ದಾರೆ. ಉಜಿರೆಯ ವಿಶಾಲ್ ಸೇವಾ ಟ್ರಸ್ಟ್ ಪ್ರತಿ ವರ್ಷ ಮಕ್ಕಳಿಗೆ ಉಚಿತ ನೋಟ್ ಪುಸ್ತಕಗಳನ್ನು ಒದಗಿಸುತ್ತಿದೆ. ಜತೆಗೆ ಈ ವರ್ಷ ಶಾಲೆಗೆ ಪೇಂಟಿಂಗ್ ಮಾಡುತ್ತೇವೆ ಎಂದು ಟ್ರಸ್ಟಿನ ಮ್ಯಾನೇಜಿಂಗ್ ಟ್ರಸ್ಟಿ ವಲೇರಿಯನ್ ಡಿಸೋಜ ಭರವಸೆ ನೀಡಿದ್ದಾರೆ’ ಎಂದರು.

ಉತ್ತಮ ಗುಣಮಟ್ಟದ ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವ ಮೂಲಕ ಇನ್ನಷ್ಟು ಮಕ್ಕಳನ್ನು ಸರ್ಕಾರಿ ಶಾಲಾ ಶಿಕ್ಷಣದತ್ತ ಆಕರ್ಷಿಸುವ ಪ್ರಯತ್ನ ಮುಂದುವರಿಯಲಿದೆ. ಈ ಸಾಧನೆಗೆ ಬೆನ್ನೆಲುಬಾಗಿ ನಿಂತ ಹಳೆ ವಿದ್ಯಾರ್ಥಿ ಸಂಘ ಹಾಗೂ ಎಸ್ಡಿಎಂಸಿಗೆ ಕಾರ್ಯ ಅಭಿನಂದನೀಯ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-29-1215754391

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.