ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೈಭವದ ಹೊರಕಾಣಿಕೆ ಮೆರವಣಿಗೆ

ಮರೋಡಿ ತಾಳಿಪಾಡಿ– ಪಲಾರಗೋಳಿ ಗರಡಿಯ ಪ್ರತಿಷ್ಠಾ ಕಲಶಾಭಿಷೇಕ
Last Updated 16 ಫೆಬ್ರುವರಿ 2021, 8:11 IST
ಅಕ್ಷರ ಗಾತ್ರ

ಬೆಳ್ತಂಗಡಿ: ತಾಲ್ಲೂಕಿನ ಮರೋಡಿ ತಾಳಿಪಾಡಿ– ಪಲಾರಗೋಳಿ ಕೊಡಮಣಿತ್ತಾಯ ಮತ್ತು ಬ್ರಹ್ಮಬೈದರ್ಕಳ ಗರಡಿಯ ಪ್ರತಿಷ್ಠಾ ಕಲಶಾಭಿಷೇಕ ಅಂಗವಾಗಿ ವಿವಿಧ ವೇಷಭೂಷಣಗಳೊಂದಿಗೆ ಹಸಿರುವಾಣಿ ಹೊರಕಾಣಿಕೆ ಮೆರವಣಿಗೆ ವಿಜೃಂಭಣೆಯಿಂದ ಸೋಮವಾರ ನಡೆಯಿತು.

ಕೇರಳ ಚೆಂಡೆ, ನಾಸಿಕ್ ಬ್ಯಾಂಡ್, ಹನುಮಾನ್ ವೇಷ, ವಿವಿಧ ತಂಡಗಳಿಂದ ಕುಣಿತ ಭಜನೆ, ನೃತ್ಯ, ವೀರಗಾಸೆ ಹಾಗೂ ವೇಷ ಭೂಷಣಗಳೊಂದಿಗೆ ಹೊರಕಾಣಿಕೆ ಮೆರವಣಿಗೆ ವಿಜೃಂಭಣೆಯಿಂದ ನಡೆಯಿತು. ನೂರಾರು ಮಹಿಳೆಯರು ಕಳಸದೊಂದಿಗೆ ಹೆಜ್ಜೆ ಹಾಕಿದರು. ಹತ್ತಾರು ಗ್ರಾಮಗಳ ಭಕ್ತರು ನೀಡಿದ ಹೊರೆಕಾಣಿಕೆಯನ್ನು ವಾಹನಗಳ ಮೂಲಕ ಮೆರವಣಿಗೆಯಲ್ಲಿ ತಂದು ಸಮರ್ಪಿಸಲಾಯಿತು.

ಶಿರ್ತಾಡಿಯಿಂದ ಆರಂಭಗೊಂಡ ಮೆರವಣಿಗೆಗೆ ಸಮಿತಿ ಗೌರವಾಧ್ಯಕ್ಷ ಎಂ.ನಮಿರಾಜ ಪಾಂಡಿ ಗುಡ್ಡಾನ್ ಬೆಟ್ಟು ಹಾಗೂ ಕಲಾಭಿಷೇಕ ಸಮಿತಿ ಗೌರವಾಧ್ಯಕ್ಷ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಚಾಲನೆ ನೀಡಿದರು.

ದಕ್ಷಿಣ ಕನ್ನಡ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ದೇವೇಂದ್ರ ಹೆಗ್ಡೆ ಕೊಕ್ರಾಡಿ, ಪ್ರಭಾ ಕ್ಲಿನಿಕ್‌ನ ಡಾ.ಆಶೀರ್ವಾದ್, ಕಲಾಭಿಷೇಕ ಸಮಿತಿ ಅಧ್ಯಕ್ಷ ರತ್ನಾಕರ ಬುಣ್ಣನ್, ಕಾರ್ಯಾಧ್ಯಕ್ಷ ಜಯಂತ್ ಕೋಟ್ಯಾನ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ರಾಮ್ ಪ್ರಸಾದ್, ಹೊರಕಾಣಿಕೆ ಸಮಿತಿ ಸಂಚಾಲಕ ಸುರೇಶ್ ಅಂಚನ್ ಅಟ್ಲಬೆಟ್ಟು, ಪ್ರಧಾನ ಕಾರ್ಯದರ್ಶಿ ಶಿವಾನಂದ ಆಚಾರ್ಯ, ಕಾರ್ಯದರ್ಶಿ ಸಂತೋಷ್, ರಮೇಶ್, ನಿತೀನ್ ಎಸ್. ಕೋಟ್ಯಾನ್, ಕೋಶಾಧಿಕಾರಿ ರವಿಂದ್ರ ಅಂಚನ್ ಅಟ್ಲಬೆಟ್ಟು, ಉಪ ಕೋಶಾಧಿಕಾರಿ ಅವಿನಾಶ್ ಕೋಟ್ಯಾನ್, ಜಾತ್ರಾ ಸಮಿತಿ ಅಧ್ಯಕ್ಷ ದಾಮೋಧರ ಪೂಜಾರಿ, ಕಾರ್ಯದರ್ಶಿ ಉಮೇಶ್ ಸಾಲ್ಯಾನ್, ಹಿರಿಯರಾದ ರಾಜು ಪೂಜಾರಿ ಪಿ.ಕೆ, ತಾಲ್ಲೂಕು ಪಂಚಾಯಿತಿ ಸದಸ್ಯ ಸುಧೀರ್ ಆರ್. ಸುವರ್ಣ, ರೂಪಾ ರವೀಂದ್ರ, ಗುತ್ತಿಗೆದಾರ ಪ್ರಶಾಂತ್ ಪ್ರತಿಮಾ ನಿಲಯ, ಅಂಡಿಂಜೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮೋಹನ್ ಅಂಡಿಂಜೆ, ಸುನೀಲ್ ಕಣಿಯೂರು ಹಾಗೂ ವಿವಿಧ ಸಮಿತಿ ಪದಾಧಿಕಾರಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

ಕಲಶಾಭಿಷೇಕ ನಾಳೆ: ಸುಮಾರು ₹ 1 ಕೋಟಿ ವೆಚ್ಚದಲ್ಲಿ ಸಂಪೂರ್ಣ ನವೀಕರಣಗೊಂಡಿರುವ ದೈವ ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಪ್ರತಿಷ್ಠಾ ಕಲಶಾಭಿಷೇಕ ಇದೇ 17ರಂದು ವೈದಿಕ ವಿಧಿವಿಧಾನಗಳೊಂದಿಗೆ ನಡೆಯಲಿದೆ.

ಫೆ.17 ರಂದು ಬೆಳಿಗ್ಗೆ ಗಂಟೆ 8.44ಕ್ಕೆ ಶ್ರೀ ದೈವಕೊಡಮಣಿತ್ತಾಯ ಮತ್ತು ಬ್ರಹ್ಮಬೈದರ್ಕಳ ಮಂಚ ಪ್ರತಿಷ್ಠಾಪನೆ, ಪ್ರತಿಷ್ಠಾಕಲಶಾಭಿಷೇಕ, ಸಂಕ್ರಾಂತಿ ಸೇವೆ, ಪ್ರಸಾದ ವಿತರಣೆ, ಪಲ್ಲಪೂಜೆ, ರಾತ್ರಿ ಶ್ರೀ ದೈವ ಕೊಡಮಣಿತ್ತಾಯ ನೇಮೋತ್ಸವ, ಸಾಂಸ್ಕೃತಿಕ ವೇದಿಕೆಯಲ್ಲಿ ಪುತ್ತೂರು ಜಗದೀಶ ಆಚಾರ್ಯ ಬಳಗದಿಂದ ಸಂಗೀತಗಾನ ಸಂಭ್ರಮ, ಫೆ.18 ರಂದು ರಾತ್ರಿ ಬ್ರಹ್ಮ ಬೈದರ್ಕಳ ನೇಮೋತ್ಸವ ಹಾಗೂ ಮಾಯಾಂದಲೆ ನೇಮ, ಫೆ.19 ರಂದು ಬೆಳಿಗ್ಗೆ ಗಂಟೆ 8.00ಕ್ಕೆ ಮಜ್ಜಾರಾಯ ನೇಮೋತ್ಸವ ಜರುಗಲಿದೆ.

ಫೆ.17ರಂದು ಮಧ್ಯಾಹ್ನ ಗೌರಿಗದ್ದೆಯ ವಿನಯ ಗುರೂಜೀ ಆಶೀರ್ವಚನ ನೀಡಲಿದ್ದಾರೆ. ರಾತ್ರಿ ನಡೆಯುವ ಧಾರ್ಮಿಕ ಸಭೆಯಲ್ಲಿ ಕನ್ಯಾಡಿ ರಾಮಕ್ಷೇತ್ರದ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಅಧ್ಯಕ್ಷತೆಯನ್ನು ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ್ ಅಜಿಲರು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕ ಹರೀಶ್ ಪೂಂಜ, ಮೂಡಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್, ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್‌ಸಿಂಹ ನಾಯಕ್, ಹರೀಶ್ ಕುಮಾರ್ ಮತ್ತಿತರರು ಭಾಗವಹಿಸಲಿದ್ದಾರೆ.

ಫೆ.18ರಂದು ರಾತ್ರಿ ನಡೆಯುವ ಧಾರ್ಮಿಕ ಸಭೆಯ ಅಧ್ಯಕ್ಷತೆಯನ್ನು ಶಾಸಕ ಹರೀಶ್ ಪೂಂಜ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಂಸದ ನಳಿನ್ ಕುಮಾರ್ ಕಟೀಲು, ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಚಿವ ಎಸ್. ಅಂಗಾರ, ಕಾರ್ಕಳ ಶಾಸಕ ಸುನೀಲ್ ಕುಮಾರ್, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಮೋಹನ್ ಆಳ್ವ ಹಾಗೂ ಇತರರು ಪಾಲ್ಗೊಳ್ಳಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT