ಬೆಳ್ತಂಗಡಿ: ವೇಶ್ಯಾವಾಟಿಕೆ ದಂದೆ ನಡೆಸುತ್ತಿದ್ದ ಕ್ಯಾಂಟಿನ್ ಮೇಲೆ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ಸಂತ್ರಸ್ತೆಯನ್ನು ರಕ್ಷಿಸಿದ್ದು, ಮೂವರನ್ನು ವಶಕ್ಕೆ ಪಡೆದು ಇಬ್ಬರು ಪ್ರಮುಖ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಬೆಳ್ತಂಗಡಿ ನಗರದ ಕೆ.ಇ.ಬಿ ರಸ್ತೆಯಲ್ಲಿರುವ ಸುಂದರ್ ಶೆಟ್ಟಿ ಮಾಲೀಕತ್ವದ ಕ್ಯಾಂಟಿನ್ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿತ್ತು.

ಕ್ಯಾಂಟಿನ್ ಮಾಲೀಕ ಪಡಂಗಡಿ ಗ್ರಾಮದ ಪೊಯ್ಯೆಗುಡ್ಡೆ ನಿವಾಸಿ ಸುಂದರ್ ಶೆಟ್ಟಿ (55) ಮತ್ತು ಸ್ನೇಹಿತ ನಾವೂರು ಗ್ರಾಮದ ಉಸ್ಮಾನ್ (38) ಎಂಬುವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ವೇಶ್ಯಾವಟಿಕೆ ಅಡ್ಡೆಗೆ ಬಂದಿದ್ದ ಕಲ್ಲೇರಿ ನಿವಾಸಿ ಹೈದರ್ (45) ಎಂಬಾತನನ್ನು ವಶಕ್ಕೆ ಪಡೆದು ಬೆಳ್ತಂಗಡಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ದಾಳಿ ವೇಳೆ ರಕ್ಷಣೆ ಮಾಡಲಾದ 29 ವರ್ಷದ ಮಹಿಳೆಯನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಪೊಲೀಸರು ಹಾಜರುಪಡಿಸಿದ್ದು, ಮಹಿಳಾ ಸಾಂತ್ವನ ಕೇಂದ್ರಕ್ಕೆ ಕಳುಹಿಸಿಕೊಡಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-29-1510673618

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.