ಬೆಳ್ತಂಗಡಿ: ತಾಲ್ಲೂಕಿನ ವಿವಿಧೆಡೆ ಗುರುವಾರ ಸಂಜೆ, ಗಾಳಿ, ಗುಡುಗು, ಸಿಡಿಲು ಸಹಿತ ಮಳೆಯಾಗಿದೆ.

ಬೆಳ್ತಂಗಡಿ ನಗರ, ಉಜಿರೆ, ಕಲ್ಮಂಜ, ಮುಂಡಾಜೆ, ಕಡಿರುದ್ಯಾವರ, ಕಕ್ಕಿಂಜೆ, ತೋಟತ್ತಾಡಿ, ಚಿಬಿದ್ರೆ, ಚಾರ್ಮಾಡಿ, ಕರಂಬಾರು, ಶಿರ್ಲಾಲು, ಮಲವಂತಿಗೆ, ಮಿತ್ತಬಾಗಿಲು, ಗೇರುಕಟ್ಟೆಯಲ್ಲಿ ಭಾರಿ ಮಳೆ ಸುರಿದಿದೆ.

ಕಡಿರುದ್ಯಾವರ ಗ್ರಾಮದ ಮಲ್ಲಡ್ಕ ಬಳಿ ಗಾಳಿ ಮಳೆಗೆ ಸುಮಾರು 20 ವಿದ್ಯುತ್ ಕಂಬಗಳು ಧರೆಗುರುಳಿವೆ.

ಕೊಲ್ಲಿ-ಕಿಲ್ಲೂರು ರಸ್ತೆಯಲ್ಲಿ ರಸ್ತೆಗೆ ಮರ ಉರುಳಿ ಎರಡು ವಿದ್ಯುತ್ ಕಂಬಗಳು ಮುರಿದಿವೆ. ತಾಲ್ಲೂಕಿನ ಅಲ್ಲಲ್ಲಿ ವಿದ್ಯುತ್ ಕಂಬಗಳು ಧರೆಗುರುಳಿರುವುದರಿಂದ ವಿದ್ಯುತ್ ಸಂಪರ್ಕದಲ್ಲಿ ವ್ಯತ್ಯಯ ಉಂಟಾಗಿದೆ.

ಕೆಲವು ಕಡೆ ಭಾರಿ ಸಿಡಿಲಿನ ಆಘಾತಕ್ಕೆ ಹಲವು ಮನೆಗಳ ವಿದ್ಯುತ್ ಉಪಕರಣಗಳಿಗೂ ಹಾನಿ ಉಂಟಾಗಿದೆ. ತಾಲ್ಲೂಕಿನ ವಿವಿಧೆಡೆ ನೂರಾರು ಅಡಿಕೆ ಮರಗಳು ಧರೆಗೆ ಉರುಳಿವೆ.

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿರುವ ಹಲವೆಡೆ ಮಳೆ ನೀರಿನೊಂದಿಗೆ ರಸ್ತೆಗೆ ಮಣ್ಣು ಹರಿದು ಬಂದಿದ್ದು, ವಾಹನ ಸವಾರರು ತೊಂದರೆ ಅನುಭವಿಸಿದರು.

ಕಾಸರಗೋಡು ಜಿಲ್ಲೆಯಲ್ಲಿ ಗುರು ವಾರ ರಾತ್ರಿ ಗುಡುಗು ಸಹಿತ ಬಿರುಸಿನ ಮಳೆಯಾಗಿದೆ. ಸಂಜೆಯಿಂದಲೇ ಮೋಡಮುಸುಕಿದ ವಾತಾವರಣವಿತ್ತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-29-537374548

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.