ಬೆಳ್ತಂಗಡಿ: ‘ತಾಲ್ಲೂಕಿನ ರಾಜ್ಯ ಸರ್ಕಾರಿ ನೌಕರರ ಮತ್ತು ಹಿರಿಯ ನಾಗರಿಕ ಸೇವಾ ಸೇವಾ ಸಂಸ್ಥೆ ರಜತ ಸಂಭ್ರಮ ಹಾಗೂ ಪ್ರಬುದ್ಧ ಕಟ್ಟಡ ಉದ್ಘಾಟನೆ ಏಪ್ರಿಲ್ 25 ರಂದು ಕೆಲ್ಲಗುತ್ತು ಅಚ್ಚಿನಡ್ಕದಲ್ಲಿ ನಡೆಯಲಿದೆ’ ಎಂದು ಸಂಘದ ಅಧ್ಯಕ್ಷ ಬಿ.ವಿಠಲ ಶೆಟ್ಟಿ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, ‘ಸಂಘವು 2000ರಲ್ಲಿ ಆರಂಭವಾಗಿ ಹತ್ತು ಹಲವು ಜನೋಪಯೋಗಿ ಕಾರ್ಯಕ್ರಮ ಮತ್ತು ವಿವಿಧ ಚಟುವಟಿಕೆಗಳೊಂದಿಗೆ ಮುನ್ನಡೆದಿದೆ' ಎಂದರು.

ಮಾಜಿ ಶಾಸಕ ವಸಂತ ಬಂಗೇರ ಅವರು ಸಂಘಕ್ಕೆ ಸ್ವಂತ ಕಟ್ಟಡಕ್ಕಾಗಿ ಪ್ರಯತ್ನಿಸಿ ಕಾಶಿಬೆಟ್ಟುವಿನಲ್ಲಿ ಸ್ಥಳ ಗುರುತಿಸಿದರೂ ಕಾನೂನು ತೊಡಕಿನಿಂದ ಸಾಧ್ಯವಾಗಲಿಲ್ಲ. ಬಳಿಕ ಸಂಘದ ಸದಸ್ಯೆ ಅಚ್ಚಿನಡ್ಕ ವೀರಮ್ಮನವರು ಸಂಘಕ್ಕೆ 10 ಸೆಂಟ್ ಸ್ಥಳವನ್ನು ದಾನ ಮಾಡುವುದಾಗಿ ತಿಳಿಸಿದಾಗ ಬೆಳ್ತಂಗಡಿ ತಾಲ್ಲೂಕು ಸರ್ಕಾರಿ ನಿವೃತ್ತ ನೌಕರರು ಮತ್ತು ಹಿರಿಯ ನಾಗರಿಕರ ಸೇವಾ ಸಂಸ್ಥೆಯನ್ನು ಹುಟ್ಟು ಹಾಕಿ ಕಾರ್ಯಾರಂಭ ಮಾಡಿ ಇದೀಗ ₹ 40 ಲಕ್ಷ ವೆಚ್ಚದಲ್ಲಿ ಕಟ್ಟಡದ ಮೊದಲ ಹಂತದ ಕಾಮಗಾರಿಯನ್ನು ಪೂರ್ಣಗೊಳಿಸಿದ್ದೇವೆ ಎಂದರು.

ಶಾಸಕ ಹರೀಶ್ ಪೂಂಜ ಕಟ್ಟಡ ಉದ್ಘಾಟಿಸಲಿದ್ದು, ಉಜಿರೆ ಎಸ್ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಸತೀಶ್ಚಂದ್ರ ಕಾರ್ಯಕ್ರಮ ಉದ್ಘಾಟಿಸುವರು. ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಮೋಹನ ಆಳ್ವ ನಾಮಫಲಕ ಅನಾವರಣ ಮಾಡುವರು. ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಸ್ಮರಣ ಸಂಚಿಕೆ ಬಿಡುಗಡೆ ಮಾಡುವರು. ಮೆಸ್ಕಾಂ ಅಧ್ಯಕ್ಷ ಕೆ ಹರೀಶ್ ಕುಮಾರ್ ದಾನಿಗಳ ಭಾವಚಿತ್ರ ಅನಾವರಣ, ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ದಾನಿಗಳ ಫಲಕ ಅನಾವರಣ, ಧಾರ್ಮಿಕ ಮುಖಂಡ ಕಿರಣ್ ಚಂದ್ರ ಡಿ ಪುಷ್ಪಗಿರಿ ಕಚೇರಿ ಕೊಠಡಿ ಉದ್ಘಾಟನೆ ಮಾಡಲಿದ್ದಾರೆ ಎಂದರು.

ಪತ್ರಿಕಾ ಗೋಷ್ಠಿಯಲ್ಲಿ ಸಂಘದ ಕಾರ್ಯದರ್ಶಿ ವಿಶ್ವಾಸ್ ರಾವ್, ಉಪಾಧ್ಯಕ್ಷರಾದ ಸನ್ಮತ್ ಕುಮಾರ್, ಕುಸುಮಾವತಿ, ಕೋಶಾಧಿಕಾರಿ ಜಗನ್ನಿವಾಸ ರಾವ್, ಸ್ವಾಗತ ಸಮಿತಿಯ ಕಾರ್ಯದರ್ಶಿ ಆರ್.ಎನ್.ಪೂವಣಿ, ಸ್ಥಳ ದಾನಿ ವೀರಮ್ಮ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-29-93972845

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.