ಬೆಳ್ತಂಗಡಿ: ‘ಕಳಿಯ ಗ್ರಾಮದ ಗೇರುಕಟ್ಟೆ ಸಮೀಪ ಶ್ರೀಧರ ಮುಗೇರ ಎಂಬುವರ ಶವ ಸಂಶಯಾಸ್ಪದ ರೀತಿಯಲ್ಲಿ ಕೆರೆಯಲ್ಲಿ ಸಿಕ್ಕ ಪ್ರಕರಣ ನಡೆದು ವರ್ಷ ಕಳೆದರೂ ಸರಿಯಾದ ತನಿಖೆ ನಡೆದಿಲ್ಲ. ತಕ್ಷಣ ಆರೋಪಿಗಳನ್ನು ಪತ್ತೆ ಹಚ್ಚಬೇಕು’ ಎಂಬ ಬಗ್ಗೆ ಬೆಳ್ತಂಗಡಿ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಪರಿಶಿಷ್ಟ ಜಾತಿ, ಪಂಗಡದವರ ಕುಂದುಕೊರತೆ ಆಲಿಸುವ ಸಭೆಯಲ್ಲಿ ಪ್ರಸ್ತಾಪವಾಯಿತು.

ದಲಿತ ಮುಖಂಡ ಸಂಜೀವ ಆರ್. ಕೇಳಿದ ಈ ಪ್ರಶ್ನೆಗೆ ಡಿವೈಎಸ್ಪಿ ರೋಹಿಣಿ ಸಿ.ಕೆ. ಉತ್ತರಿಸಿ, ‘ಆತ ಬಳಸಿದ ಮೊಬೈಲ್ ಫೋನ್ ಮಾಹಿತಿ ಸಂಗ್ರಹಿಸಲಾಗುತ್ತಿದ್ದು, ವರದಿ ಬಂದಿಲ್ಲ. ಪ್ರಕರಣದ ತನಿಖೆ ಮುಂದುವರಿದಿದೆ’ ಎಂದು ತಿಳಿಸಿದರು.

ಬೆಳಾಲಿನಲ್ಲಿ ಕಳೆದ ಜುಲೈನಲ್ಲಿ ವೀಣಾ ಎಂಬಾಕೆಯ ಶವ ಮನೆಯ ಬಾವಿಯಲ್ಲಿ ಪತ್ತೆಯಾದ ಪ್ರಕರಣ ಸೂಕ್ತ ರೀತಿಯಲ್ಲಿ ತನಿಖೆಯಾಗಬೇಕು ಎಂದು ಸೇಸಪ್ಪ ನಲ್ಕೆ ಅಳದಂಗಡಿ ಒತ್ತಾಯಿಸಿದರು.

‘ತಾಲ್ಲೂಕಿನಲ್ಲಿ ಮಾದಕ ವಸ್ತುಗಳ ಹಾವಳಿ ಹೆಚ್ಚುತ್ತಿದೆ. ಗಾಂಜಾ ಪೂರೈಕೆದಾರರನ್ನು ಪತ್ತೆ ಹಚ್ಚಬೇಕು’ ಎಂದು ಬಿ.ಕೆ ವಸಂತ ಆಗ್ರಹಿಸಿದರು.

ಸಾರ್ವಜನಿಕ ಶಾಂತಿಭಂಗ ಮಾಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಶೇಖರ ಲಾಯಿಲ ಆಗ್ರಹಿಸಿದರು. ಬೆಳ್ತಂಗಡಿ ಪೊಲೀಸ್ ಠಾಣೆಗೆ ಇನ್ಸ್ಪೆಕ್ಟರ್ ನೇಮಕ ವಾಗಬೇಕು. ಎಸ್ಪಿ ನೇತೃತ್ವದಲ್ಲಿ ಸಭೆ ನಡೆಯಬೇಕು. 2 ತಿಂಗಳಿಗೆ ಒಂದು ಬಾರಿಯದರೂ ಸಭೆಗೆ ಎಸ್ಪಿ ಬರಬೇಕು ಎಂದು ಶೇಖರ್ ಲಾಯಿಲ ಆಗ್ರಹಿಸಿದರು.

ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಸಭೆಗೆ ಯಾಕೆ ಹಾಜರಾಗಿಲ್ಲ ಎಂದು ನೇಮಿರಾಜ್ ಕಿಲ್ಲೂರು, ಶೇಖರ್ ಕುಕ್ಕೇಡಿ, ರಮೇಶ್ ಆರ್. ಪ್ರಶ್ನಿಸಿದರು. ಧರ್ಮಸ್ಥಳ ಕೆಎಸ್ಆರ್ಟಿಸಿ ಅಧಿಕಾರಿಗಳು ಸ್ವಚ್ಛತಾ ಸಿಬ್ಬಂದಿಯನ್ನು ಅವಮಾನಿಸಿರುವುದು ಸರಿಯಲ್ಲ ಎಂದು ತರಾಟೆಗೆ ತೆಗೆದುಕೊಂಡರು.

ಸಿ.ಕೆ.ಚಂದ್ರಕಲಾ ಮಾತನಾಡಿ, ಪೋಲಿಸ್ ಇಲಾಖೆ ದಲಿತ ಕಾಲೊನಿಗಳಿಗೆ ಭೇಟಿ ನೀಡಿ ಕಾನೂನು ಮಾಹಿತಿ ನೀಡಬೇಕು ಎಂದರು.

‘ಜಿಲ್ಲೆಯಲ್ಲಿ ಅರಣ್ಯ, ಕಂದಾಯ ಜಮೀನಿನ ಬಗ್ಗೆ ಗೊಂದಲಗಳಿದ್ದು, ಜಂಟಿ ಸರ್ವೆ ನಡೆಸದೆ ಅರಣ್ಯ ಇಲಾಖೆ ಗುಪ್ಪೆಗಳನ್ನು ನಿರ್ಮಾಣ ಮಾಡುತ್ತಿರುವುದು ಸರಿಯಲ್ಲ’ ಎಂದು ಶೇಖರ್ ಲಾಯಿಲ ಹೇಳಿದರು.

ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯವು ಪ್ರಸ್ತುತ ಪರಿಶಿಷ್ಟ ಜಾತಿ, ಪಂಗಡಗಳ ದೌರ್ಜನ್ಯ ತಡೆ ಪೋಲಿಸ್ ಠಾಣೆಯಾಗಿ ಕಾರ್ಯನಿರ್ವಹಿಸುತ್ತಿದ್ದು, ಇಲ್ಲಿಗೆ ಜಿಲ್ಲೆಯ 42 ಪೋಲಿಸ್ ಠಾಣೆಗಳ ದಲಿತ ದೌರ್ಜನ್ಯ ಪ್ರಕರಣಗಳ ತನಿಖೆ, ಆರೋಪಿಗಳ ಬಂಧನ, ನ್ಯಾಯಾಲಯಕ್ಕೆ ಅಂತಿಮ ವರದಿ ಸೇರಿದಂತೆ ವಿವಿಧ ಕೆಲಸಗಳನ್ನು ನಿರ್ವಹಿಸಲು ಸಿಬ್ಬಂದಿ ಕೊರತೆ ಇದೆ. ಪ್ರಸ್ತುತ ಒಬ್ಬ ಎಸ್ಪಿ, ಇನ್ಸ್ಪೆಕ್ಟರ್, ಪಿಎಸ್ಐ, 3 ಹೆಡ್ ಕಾನ್ಸ್ಟೆಬಲ್, 6 ಕಾನ್ಸ್ಟೆಬಲ್ಗಳು ಇದ್ದು ಸೂಕ್ತ ಸಿಬ್ಬಂದಿ ನೇಮಕವಾಗಬೇಕು ಎಂದು ಒತ್ತಾಯಿಸಿದರು. ಡಿವೈಎಸ್ಪಿ ಕಚೇರಿಯ ಮಹಿಳಾ ಹೆಡ್ಕಾನ್ಸ್ಟೆಬಲ್ ಸವಿತಾ ಶೆಟ್ಟಿ ಸ್ವಾಗತಿಸಿ, ಸಮರ್ಥ್ ಆರ್. ಗಾಣಿಗೇರ್ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-29-454949581

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.