ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳ್ತಂಗಡಿ: ಏಳು ಧಾರ್ಮಿಕ ಕೇಂದ್ರಗಳ ಅಭಿವೃದ್ಧಿಗೆ ₹2 ಕೋಟಿ ಬಿಡುಗಡೆ

Last Updated 15 ಸೆಪ್ಟೆಂಬರ್ 2022, 16:15 IST
ಅಕ್ಷರ ಗಾತ್ರ

ಬೆಳ್ತಂಗಡಿ: ತಾಲ್ಲೂಕಿನ 7 ದೇವಾಲಯಗಳಿಗೆ ಜೀರ್ಣೋದ್ಧಾರ ಕಾರ್ಯ ಹಾಗೂ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲು ವಿಶೇಷ ಅನುದಾನವಾಗಿ ₹ 2 ಕೋಟಿ ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ.

ಓಡಿಲ್ನಾಳ ಗ್ರಾಮದ ಮೈರಳಿಕೆ ಕಿರಾತಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನ ಜೀರ್ಣೋದ್ದಾರಕ್ಕೆ ₹ 50 ಲಕ್ಷ, ಮಿತ್ತಬಾಗಿಲು ಗ್ರಾಮದ ಕೊಲ್ಲಿ ದುರ್ಗಾಪರಮೇಶ್ವರಿ ದೇವಸ್ಥಾನ ಜೀರ್ಣೋದ್ಧಾರಕ್ಕೆ ₹ 50 ಲಕ್ಷ,ಮರೋಡಿ ಗ್ರಾಮದ ಪಲಾರಗೋಳಿ ದೈವ ಕೊಡಮಣಿತ್ತಾಯ ಮತ್ತು ಬ್ರಹ್ಮಬೈದರ್ಕಳ ಗರಡಿಗೆ ₹ 25 ಲಕ್ಷ, ನೆರಿಯ ಗ್ರಾಮದ ಕಾಟಾಜೆ ದುರ್ಗಾಪರಮೇಶ್ವರಿ ದೇವಸ್ಥಾನ ಜೀರ್ಣೋದ್ಧಾರಕ್ಕೆ ₹ 25 ಲಕ್ಷ, ಶಿಬಾಜೆ ಗ್ರಾಮದ ಮೊಟೆತಡ್ಕ ದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಭವನ ನಿರ್ಮಾಣಕ್ಕೆ ₹ 20 ಲಕ್ಷ, ಮುಂಡೂರು ಗ್ರಾಮದ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ₹ 15 ಲಕ್ಷ, ಚಾರ್ಮಾಡಿ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದ ಸಭಾ ಭವನ ನಿರ್ಮಾಣಕ್ಕೆ ₹ 15 ಲಕ್ಷ ಬಿಡುಗಡೆಯಾಗಿದೆ.

ಈಗಾಗಲೇ ಮುಖ್ಯಮಂತ್ರಿಯಿಂದ ಅನುಮೋದನೆಗೊಂಡು, ಆರ್ಥಿಕ ಇಲಾಖೆಯ ಒಪ್ಪಿಗೆಯಂತೆ ವಿಶೇಷ ಅನುದಾನದಡಿ ಈ ಮೊತ್ತ ಬಿಡುಗಡೆಯಾಗಿದ್ದು, ಮೊದಲನೇ ಕಂತಿನ ₹ 1 ಕೋಟಿಯನ್ನು ಜಿಲ್ಲಾಧಿಕಾರಿಯ ಪಿ.ಡಿ.ಖಾತೆಗೆ ಜಮೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT