ಬೆಳ್ತಂಗಡಿ (ದಕ್ಷಿಣ ಕನ್ನಡ) : ವೇಣೂರು ಪೊಲೀಸ್ ಠಾಣೆ ವ್ಯಾಪ್ತಿಯ ಗೋಳಿಯಂಗಡಿ ಸಮೀಪದ ಕಡ್ತ್ಯಾರು ಪಟಾಕಿ ತಯಾರಿ ಘಟಕದಲ್ಲಿ ಭಾನುವಾರ ಸಂಜೆ ಸ್ಫೋಟ ಸಂಭವಿಸಿ ಮೂವರು ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಮೃತರ ದೇಹಗಳು ಛಿದ್ರವಾಗಿವೆ.

ಕುಕ್ಕೇಡಿಯ ಬಶೀರ್ ಎಂಬವರ ಜಮೀನಿನಲ್ಲಿ ಪಟಾಕಿ ತಯಾರಿಸುತ್ತಿದ್ದರು. ಒಟ್ಟು 9 ಮಂದಿ ಕೂಲಿ ಕಾರ್ಮಿಕರು ಇಲ್ಲಿ ಪಟಾಕಿ ತಯಾರಿಸುತ್ತಿದ್ದರು. ತ್ರಿಶೂರಿನ ವರ್ಗೀಸ್, ಹಾಸನ ಅಂಕನಾಯಕನಹಳ್ಳಿ ಚೇತನ್, ಕೇರಳದ ಸ್ವಾಮಿ ಮೃತಪಟ್ಟವರು. ಮೃತರ ಪೈಕಿ ಓರ್ವನ ಮೃತದೇಹ ದೊರೆತಿದ್ದು, ಇನ್ನಿಬ್ಬರ ದೇಹದ ಭಾಗಗಳು ಸ್ಫೋಟದ ರಭಸಕ್ಕೆ ಛಿದ್ರವಾಗಿ ಚದುರಿ ಬಿದ್ದಿವೆ. ಇಲ್ಲಿ ಹಾಸನದ ದಿನೇಶ, ಕಿರಣ, ಅರಸೀಕೆರೆಯ ಕುಮಾರ , ಚಿಕ್ಕಮಾರಹಳ್ಳಿಯ ಕಲ್ಲೇಶ, ಕೇರಳದ ಪ್ರೇಮ್ ಕೇರಳ, ಕೇಶವ ಇಲ್ಲಿ ಕೆಲಸ ನಿರ್ವಹಿಸುತ್ತಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಸ್ಥಳಕ್ಕೆ ಬೆಳ್ತಂಗಡಿ ಅಗ್ನಿಶಾಮಕ ಸಿಬಂದಿ ತಕ್ಷಣ ಬೆಂಕಿನಂದಿಸಿ ಅರೆ ಜೀವಾವಸ್ಥೆಯಲ್ಲಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸಿದರೂ. ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದರು. ಸ್ಥಳದಲ್ಲಿ ಶೆಡ್ ಸಂಪೂರ್ಣ ಧ್ವಂಸವಾಗಿದ್ದು, ಇದರ ಸದ್ದು 4 ಕಿ.ಮೀ. ದೂರಕ್ಕೆ ಕೇಳಿಸಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

‘ಸಾಲಿಡ್ ಫೈರ್ ವರ್ಕ್ಸ್’ ಎಂಬ ಈ ಪಟಾಕಿ ತಯಾರಿಕೆ ಘಟಕ 50 ವರ್ಷಗಳಿಂದ ಇದೆ. ಇಲ್ಲಿ ಪಟಾಕಿ ತಯಾರಿಸಿ ಹಲವಾರು ಜಾತ್ರೆ ಹಾಗೂ ಇತರ ಕಾರ್ಯಕ್ರಮಗಳಿಗೆ ಪೂರೈಸುತ್ತಿದ್ದರ. ಇದಕ್ಕೆ ಪರವಾನಗಿ ಇತ್ತೇ ಎಂಬುದು ಖಚಿತವಾಗಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.