ಬೆಳ್ತಂಗಡಿ: ‘ಗುಣಮಟ್ಟದ ಶಿಕ್ಷಣದ ಮೂಲಕ ರಾಜ್ಯದಲ್ಲೇ ಶ್ರೇಷ್ಠ ಸಂಸ್ಥೆಯಾಗಿ ವಾಣಿ ವಿದ್ಯಾಸಂಸ್ಥೆ ಬೆಳೆಯುತ್ತಿದೆ. ಗ್ರಾಮೀಣ ವಿದ್ಯಾರ್ಥಿಗಳಿಗೆ ಸ್ಪಂದಿಸಿ ಅವರ ಪ್ರತಿಭೆಗಳನ್ನು ರಾಜ್ಯ, ರಾಷ್ಟ್ರಮಟ್ಟಕ್ಕೆ ತಿಳಿಯಪಡಿಸುವ ಸಂಸ್ಥೆಯ ಕಾರ್ಯ ಶ್ಲಾಘನೀಯ’ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಹೇಳಿದರು.

ಬೆಳ್ತಂಗಡಿಯ ವಾಣಿ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ಮಂಗಳವಾರ ನಡೆದ ವಾಣಿ ವಿದ್ಯಾ ಸಮ್ಮಾನ್ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

‘ಸರ್ಕಾರಿ ಮತ್ತು ಬಹುತೇಕ ಅನುದಾನಿತ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಇದ್ದು, ಗುಣಮಟ್ಟದ ಶಿಕ್ಷಣ ನೀಡುವುದು ಸವಾಲಾಗಿದೆ. ಸರ್ಕಾರ ಸಂವಿಧಾನದ ಆಶಯಗಳನ್ನು ಈಡೇರಿಸಬೇಕು. ಪ್ರತಿಯೊಬ್ಬರಿಗೂ ಉತ್ತಮ ಆರೋಗ್ಯ ಮತ್ತು ಗುಣಮಟ್ಟದ ಶಿಕ್ಷಣ ನೀಡುವುದು ಸರ್ಕಾರದ ಬದ್ಧತೆಯಾಗಬೇಕು. ಕನ್ನಡ ಆಡಳಿತ ಭಾಷೆ ಎಂದು ಹೇಳಿದರೆ ಸಾಕಾಗದು. ಕನ್ನಡ ಶಾಲೆಯನ್ನು ಉಳಿಸುವ ಕಡೆಗೆ ಗಮನ ಕೊಡಬೇಕು’ ಎಂದು ಅವರು ಹೇಳಿದರು.

ನಾವೂರು ಆರೋಗ್ಯ ಕ್ಲಿನಿಕ್ನ ಡಾ.ಪ್ರದೀಪ್ ಆಟಿಕುಕ್ಕೆ ಮಾತನಾಡಿ, ‘ಸಮುದಾಯವೊಂದು ಸಮಾಜಕ್ಕೆ ಏನು ಮಾಡಬಹುದು ಎಂಬುದನ್ನು ವಾಣಿ ಶಿಕ್ಷಣ ಸಂಸ್ಥೆಯು ತೋರಿಸಿಕೊಟ್ಟಿದೆ. ಮಕ್ಕಳ ಬದುಕಿನಲ್ಲಿ ಜೀವನದ ಸತ್ಯವನ್ನು ತಿಳಿಸುವ ಕೆಲಸವನ್ನು ಶಿಕ್ಷಕರು ಮಾಡುತ್ತಾರೆ. ಗುರುವೃಂದದ ಮೇಲೆ ಸದಾ ಶ್ರದ್ಧೆ ಮತ್ತು ನಂಬಿಕೆ ಶಿಷ್ಯ ವೃಂದಕ್ಕೆ ಇರಬೇಕು’ ಎಂದರು.

ವಾಣಿ ಶಿಕ್ಷಣ ಸಂಸ್ಥೆಗಳ ಗೌರವಾಧ್ಯಕ್ಷ ಎಚ್.ಪದ್ಮಗೌಡ ಮಾತನಾಡಿದರು.

ವಾಣಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಪಿ.ಕುಶಾಲಪ್ಪ ಗೌಡ ಅಧ್ಯಕ್ಷತೆ ವಹಿಸಿದ್ದರು.

ಬೆಳ್ತಂಗಡಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ಜಯಾನಂದ ಗೌಡ ಟಿ., ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ, ವಾಣಿ ಶಿಕ್ಷಣ ಸಂಸ್ಥೆಗಳ ಮಾಜಿ ಅಧ್ಯಕ್ಷ ಸೋಮೇಗೌಡ, ಉಪಾಧ್ಯಕ್ಷರಾದ ನಾರಾಯಣ ಗೌಡ ದೇವಸ್ಯ, ಧರ್ಣಪ್ಪ ಗೌಡ, ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ, ಜತೆ ಕಾರ್ಯದರ್ಶಿ ಶ್ರೀನಾಥ್ ಕೆ.ಎಂ., ಕೋಶಾಧಿಕಾರಿ ಯುವರಾಜ ಅನಾರು, ಮಾಜಿ ಕಾರ್ಯದರ್ಶಿ ಮೋಹನ ಗೌಡ, ನಿರ್ದೇಶಕರಾದ ಕೃಷ್ಣಪ್ಪ ಗೌಡ, ಗೋಪಾಲಕೃಷ್ಣ ಗೌಡ ಗುಳ್ಳೋಡಿ, ವಾಣಿ ಸೌಹಾರ್ದ ಸಹಕಾರ ಸಂಘದ ನಿರ್ದೇಶಕರಾದ ಡಿ.ಎಂ.ಗೌಡ, ಮಾಧವ ಗೌಡ, ವಿಜಯ ಕುಮಾರ್, ದಿನೇಶ್ ಗೌಡ, ಯುವ ವೇದಿಕೆ ಅಧ್ಯಕ್ಷ ಚಂದ್ರಕಾಂತ ನಿಡ್ಡಾಜೆ, ಮಹಿಳಾ ವೇದಿಕೆ ಅಧ್ಯಕ್ಷೆ ಗೀತಾ ರಾಮಣ್ಣ ಗೌಡ, ಸಂಸ್ಥೆಯ ಆಡಳಿತಾಧಿಕಾರಿ ಪ್ರಸಾದ್ ಕುಮಾರ್, ವಾಣಿ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಸುಹಾಸಿನಿ ಭಾಗವಹಿಸಿದ್ದರು.

ಕೊಕ್ರಾಡಿ ಸರ್ಕಾರಿ ಪ್ರೌಢಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ಮಹಮ್ಮದ್ ರಿಯಾಜ್, ಗುರುವಾಯನಕೆರೆ ಪ್ರೌಢಶಾಲೆಯ ಆಂಗ್ಲ ಭಾಷೆ ಶಿಕ್ಷಕ ಜಗನ್ನಾಥ, ಕಾಯರ್ತಡ್ಕ ಸರ್ಕಾರಿ ಪ್ರೌಢಶಾಲೆಯ ಗಣಿತ ಶಿಕ್ಷಕಿ ವಾಣಿ, ಬೆಳ್ತಂಗಡಿ ಸರ್ಕಾರಿ ಪ್ರೌಢಶಾಲೆಯ ಸಹ ಶಿಕ್ಷಕ ಸುರೇಶ್ ಶೆಟ್ಟಿ, ಬೆಂದ್ರಾಳ ಸೇಂಟ್ ಸಾವಿಯೊ ಆಂಗ್ಲ ಮಾಧ್ಯಮ ಶಾಲೆಯ ಕನ್ನಡ ಭಾಷಾ ಶಿಕ್ಷಕ ವಸಂತ ಎ. ಅವರಿಗೆ ವಾಣಿ ವಿದ್ಯಾ ಸಮ್ಮಾನ್ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಕಾಲೇಜಿನ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವಿಷ್ಣುಪ್ರಕಾಶ್ ಎಂ.ಸ್ವಾಗತಿಸಿದರು. ವಾಣಿ ಆಂಗ್ಲ ಮಾಧ್ಯಮ ಶಾಲೆ ಮುಖ್ಯಶಿಕ್ಷಕ ಲಕ್ಷ್ಮೀನಾರಾಯಣ ಕೆ. ವಂದಿಸಿದರು. ಕನ್ನಡ ಭಾಷಾ ಉಪನ್ಯಾಸಕ ಬೆಳ್ಳಿಯಪ್ಪ, ಆಂಗ್ಲ ಭಾಷಾ ಉಪನ್ಯಾಸಕಿ ಅನುರಾಧ ಕಾರ್ಯಕ್ರಮ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.