ಮಂಗಳೂರು: ನಗರದ ಹೋಟೆಲ್ ಮ್ಯಾನೇಜ್ಮೆಂಟ್ ಕಾಲೇಜೊಂದರಲ್ಲಿ ಓದುತ್ತಿದ್ದ ವಿದ್ಯಾರ್ಥಿಯೊಬ್ಬರು ತಾವು ವಾಸವಿದ್ದ ಪಿ.ಜಿ. ಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಮೆ ಮಾಡಿಕೊಂಡಿದ್ದಾರೆ.

ಬೆಂಗಳೂರು ಕುಮಾರಸ್ವಾಮಿ ಬಡಾವಣೆಯ ಭರತ್ ಭಾಸ್ಕರ್ (20) ಆತ್ಮಹತ್ಯೆ ಮಾಡಿಕೊಂಡವರು. ಆತ್ಮಹತ್ಯೆಗೆ ಮುನ್ನ ತಾಯಿಗೆ ಕರೆ ಮಾಡಿದ್ದಾರೆ. ಆ ವೇಳೆ ಕರೆ ಸ್ವೀಕರಿಸಲು ತಾಯಿಗೆ ಸಾಧ್ಯವಾಗಿರಲಿಲ್ಲ ಎಂದು ಮನೆಯವರು ತಿಳಿಸಿದ್ದಾರೆ. ‘ಡೊನೇಶನ್ ನೀಡಿದರೂ ಕಾಲೇಜಿನಲ್ಲಿ ವ್ಯವಸ್ಥೆ ಸರಿಯಿಲ್ಲ. ಪ್ರಾಧ್ಯಾಪಕರೊಬ್ಬರು ನಾನು ಮಾಡಿದ ಪ್ರಾಜೆಕ್ಟ್ ವರ್ಕ್ ಸರಿ ಇಲ್ಲ ಎಂದು ಸಹಿ ಮಾಡದೆ ಮನಸ್ಸಿಗೆ ನೋವಾಗುವಂತೆ ನಡೆದುಕೊಂಡರು. ಪರೀಕ್ಷೆಗೆ ಕುಳಿತುಕೊಳ್ಳಲು ಸಾಧ್ಯವಿಲ್ಲ ಎಂದಿದ್ದಾರೆ. ಆದ್ದರಿಂದ ಈ ಲೋಕವನ್ನು ತ್ಯಜಿಸುತ್ತಿದ್ದೇನೆ’ ಎಂದು ಭರತ್, ವಾಟ್ಸ್ಆ್ಯಪ್ ಸಂದೇಶವನ್ನು ತಾಯಿಗೆ ಕಳುಹಿಸಿ, ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಂಗಳೂರಿಗೆ ಬಂದಿರುವ ತಂದೆ, ತಾಯಿ ಮಗನ ಸಾವಿಗೆ ಕಾರಣರಾಗಿರುವವರ ವಿರುದ್ಧ ತನಿಖೆ ನಡೆಸಿ ನ್ಯಾಯ ದೊರಕಿಸಿ ಕೊಡಬೇಕು ಎಂದು ಉರ್ವ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.