ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಶಸ್ಸಿನ ಹಿಂದೆ ಗುರುಗಳ ಪಾತ್ರ

ಶಿಕ್ಷಕರ ದಿನಾಚರಣೆಯಲ್ಲಿ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ
Last Updated 5 ಸೆಪ್ಟೆಂಬರ್ 2020, 15:08 IST
ಅಕ್ಷರ ಗಾತ್ರ

ಮಂಗಳೂರು: ‘ಪ್ರತಿ ವ್ಯಕ್ತಿಗಳ ಯಶಸ್ಸಿನ ಹಿಂದೆ ಗುರುಗಳ ಪಾತ್ರ ಇರುತ್ತದೆ. ಮಕ್ಕಳಿಗೆ ಶಿಕ್ಷಕರೇ ಹೀರೋಗಳು. ಹಾಗಾಗಿ ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ತರವಾಗಿದೆ’ ಎಂದು ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಹೇಳಿದರು.

ದಕ್ಷಿಣ ಕನ್ನಡ ಜಿಲ್ಲಾಡಳಿತ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಉರ್ವದ ಕೆನರಾ ಪ್ರೌಢಶಾಲೆಯಲ್ಲಿ ಶನಿವಾರ ನಡೆದ ಜಿಲ್ಲಾ ಮಟ್ಟದ ‘ಉತ್ತಮ ಶಿಕ್ಷಕ’ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಉತ್ತಮ ಶಿಕ್ಷಕರುಗಳನ್ನು ಹೊಂದಿದ ಶಾಲೆಯೇ ಉತ್ತಮ ಶಾಲೆ ಹೊರತು, ದೊಡ್ಡ ದೊಡ್ಡ ಕಟ್ಟಡಗಳನ್ನು ಹೊಂದಿರುವುದಲ್ಲ ಎಂದು ಅವರು ಹೇಳಿದರು.ಶಾಸಕ ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಿದರು. ‌

ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಮಹಮ್ಮದ್ ಮೋನು, ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದ ಸಹನಿರ್ದೇಶಕ ಸಿಪ್ರಿಯನ್ ಮೊಂತೆರೊ, ಜಿಲ್ಲಾ ಪಂಚಾಯಿತಿ. ಸದಸ್ಯರಾದ ಜನರ್ದಾನ ಗೌಡ, ಧನಲಕ್ಷ್ಮೀ ಶೆಟ್ಟಿ, ತಾಲ್ಲೂಕು ಪಂಚಾಯಿತಿ ಸದಸ್ಯರಾದ ವಜ್ರಾಕ್ಷಿ ಶೆಟ್ಟಿ, ರಶ್ಮಿ ಆಚಾರ್ಯ, ಶಶಿಕಲಾ, ಮಂಗಳೂರು ವಲಯ ಬಿಇಒ ಸದಾನಂದ ಪೂಂಜಾ, ಮಹಾನಗರ ಪಾಲಿಕೆ ಸದಸ್ಯೆ ಸಂಧ್ಯಾ ಮೋಹನ ಆಚಾರ್ಯ, ಕೆನರಾ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ನಮಿತಾ ಪ್ರಕಾಶ್ , ಶಿಕ್ಷಣಾಧಿಕಾರಿ ದಯಾವತಿ, ಮಂಜುಳಾ ಶೆಟ್ಟಿ, ರವೀಂದ್ರನಾಥ ಶೆಟ್ಟಿ ಇದ್ದರು.

ವಿಶೇಷ ಪ್ರಶಸ್ತಿ: ಮಂಗಳೂರು ದಕ್ಷಿಣ ವಲಯದ ವಾಮಂಜೂರಿನ ಅನುದಾನಿತ ಮಂಗಳ ಜ್ಯೋತಿ ಸಮಗ್ರಪ್ರೌಢ ಶಾಲೆಯ ಯೋಗ ಮತ್ತು ದೈಹಿಕ ಶಿಕ್ಷಣ ಶಿಕ್ಷಕ ಶೇಖರ್ ನಾಯ್ಕ (ಕಡ್ತಲ) ಅವರಿಗೆ ಜಿಲ್ಲಾ ಮಟ್ಟದ ವಿಶೇಷ ಪ್ರಶಸ್ತಿ ಪ್ರದಾನ ಮಾಡಲಾಯಿತು. ರಾಷ್ಟ್ರಪ್ರಶಸ್ತಿ ವಿಜೇತ ಯಾಕೂಬ್,ಕಳೆದ ಬಾರಿ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರನ್ನು ಸಮ್ಮಾನಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT