ಉಜಿರೆ: ಪಂಚೇಂದ್ರಿಯಗಳ ನಿಯಂತ್ರಣದೊಂದಿಗೆ ಪರಿಶುದ್ಧ ದೇಹ ಮತ್ತು ಮನಸ್ಸಿನಿಂದ ರಾಗ, ತಾಳ, ಲಯಬದ್ಧವಾಗಿ ಭಜನೆ ಮಾಡುವುದರಿಂದ ಸಂಸ್ಕಾರಯುತ, ಆರೋಗ್ಯಪೂರ್ಣ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದು ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಹೇಳಿದರು.

ಧರ್ಮಸ್ಥಳದಲ್ಲಿ 27ನೇ ವರ್ಷದ ಭಜನಾ ಕಮ್ಮಟ ಉದ್ಘಾಟಿಸಿ ಅವರು ಮಾತನಾಡಿದರು.

ಮಾಣಿಲದ ಮೋಹನದಾಸ ಸ್ವಾಮೀಜಿ ಮಾತನಾಡಿ, ಭಜನಾ ತರಬೇತಿ ಪಡೆದವರು ಮಕ್ಕಳಿಗೂ ಭಜನೆಯ ಮೂಲಕ ಉತ್ತಮ ಸಂಸ್ಕಾರ ನೀಡಬೇಕು. ಭಜನೆ ಮಾಡುವಾಗ ನಿತ್ಯವೂ ಶಿವಪಂಚಾಕ್ಷರಿ ಪಠಿಸಬೇಕು ಎಂದು ಸಲಹೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಮಾತನಾಡಿ, ಭಜನಾ ತರಬೇತಿ ಪಡೆದವರು ಶಿಸ್ತು, ಸಮಯಪಾಲನೆ, ಸ್ವಚ್ಛತೆಯೊಂದಿಗೆ ನಾಯಕತ್ವಗುಣವನ್ನೂ ಬೆಳೆಸಿಕೊಂಡು ಪ್ರಗತಿಯ ರೂವಾರಿಗಳಾಗಬೇಕು ಎಂದರು.

ಹೇಮಾವತಿ ವೀ.ಹೆಗ್ಗಡೆ ಮತ್ತು ಡಿ.ಹಷೇಂದ್ರ ಕುಮಾರ್ ಭಾಗವಹಿಸಿದ್ದರು. ಭಜನಾ ಕಮ್ಮಟದ ಕಾಯದರ್ಶಿ ಎ.ವಿ.ಶೆಟ್ಟಿ ವರದಿ ಮಂಡಿಸಿದರರು.

ವಿದುಷಿ ಚೈತ್ರಾ ಧರ್ಮಸ್ಥಳ ಮತ್ತು ಬಳಗದವರ ನೃತ್ಯ ಪ್ರದರ್ಶನ ನಡೆಯಿತು. ಭಜನಾಕಮ್ಮಟದ ಸಂಚಾಲಕ ಸುಬ್ರಹ್ಮಣ್ಯಪ್ರಸಾದ್ ಸ್ವಾಗತಿಸಿದರು. ನಿವೃತ್ತ ಮುಖ್ಯ ಶಿಕ್ಷಕ ಪದ್ಮರಾಜ್ ವಂದಿಸಿದರು. ಧರ್ಮಸ್ಥಳದ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಪದ್ಮಶ್ರೀ ಕಾರ್ಯಕ್ರಮ ನಿರ್ವಹಿಸಿದರು. ಒಟ್ಟು 182 ಶಿಬಿರಾರ್ಥಿಗಳು ಕಮ್ಮಟದಲ್ಲಿ ಭಾಗವಹಿಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.