ಮಂಗಳವಾರ, ಅಕ್ಟೋಬರ್ 22, 2019
25 °C

ಧರ್ಮಸ್ಥಳದಲ್ಲಿ ಭಜನಾ ತರಬೇತಿ : 22ರಂದು ಸಮಾರೋಪ

Published:
Updated:
Prajavani

ಉಜಿರೆ: ಧರ್ಮಸ್ಥಳದಲ್ಲಿ ಒಂದು ವಾರ ನಡೆದ ಭಜನಾ ತರಬೇತಿ ಶಿಬಿರದ ಸಮಾರೋಪ ಸಮಾರಂಭ ಇದೇ 22ರಂದು  ಅಮೃತವರ್ಷಿಣಿ ಸಭಾ ಭವನದಲ್ಲಿ ನಡೆಯಲಿದ್ದು, ಕೇಂದ್ರ ಸರ್ಕಾರದ ಪಶುಸಂಗೋಪನೆ ಮತ್ತು ಕೈಗಾರಿಕಾ ಸಚಿವ ಪ್ರತಾಪ್‌ಚಂದ್ರ ಸಾರಂಗಿ ಶುಭಾಶಂಸನೆ ಮಾಡುವರು.

ಹರಿಹರಪುರ ಮಠದ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ಆಶೀರ್ವಚನ ನೀಡುವರು. ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಶಾಸಕ ಹರೀಶ್ ಪೂಂಜ ಮುಖ್ಯ ಅತಿಥಿಗಳಾಗಿವರು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆ ವಹಿಸುವರು.

ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ 300 ಭಜನಾ ಮಂಡಳಿಗಳ 5,000 ಭಜನಾ ಪಟುಗಳಿಂದ ನೃತ್ಯ ಭಜನೆ ನಡೆಯಲಿದೆ.

ಸಂಪನ್ಮೂಲ ವ್ಯಕ್ತಿಗಳು: ಖ್ಯಾತ ಗಾಯಕರಾದ ಶಂಕರ್ ಶ್ಯಾನುಭಾಗ್, ರಾಮಕೃಷ್ಣ ಕಾಟುಕುಕ್ಕೆ, ರಾಜೇಶ್ ಪಡಿಯಾರ್, ಉಷಾ ಹೆಬ್ಬಾರ್, ದೇವದಾಸ ಪ್ರಭು, ಶಂಕರ್ ಉಡುಪಿ, ಉಷಾ ಹೆಬ್ಬಾರ್, ದೇವದಾಸ ಪ್ರಭು, ಶಂಕರ್ ಉಡುಪಿ, ರಮೇಶ್ ಕಲ್ಮಾಡಿ, ಮಂಗಲದಾಸ ಗುಲ್ವಾಡಿ, ಮೋಹನದಾಸ ಶೆಣೈ, ನಾಗೇಶ ಶೆಣೈ, ಮನೋರಮಾ ತೋಳ್ಪಾಡಿತ್ತಾಯ ಭಜನಾ ತರಬೇತಿ ನೀಡುತ್ತಿದ್ದಾರೆ. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ, ಹೇಮಾವತಿ ವಿ. ಹೆಗ್ಗಡೆ ಹಾಗೂ ಮಾಣಿಲದ ಮೋಹನದಾಸ ಸ್ವಾಮೀಜಿ ಮಾರ್ಗದರ್ಶನ ನೀಡುತ್ತಿದ್ದಾರೆ.

145 ಮಂದಿ ಪುರುಷರು ಹಾಗೂ 105 ಮಹಿಳೆಯರು ತರಬೇತಿಯಲ್ಲಿ ಭಾಗವಹಿಸುತ್ತಿದ್ದಾರೆ. ಪ್ರಾರ್ಥನೆ, ಧ್ಯಾನ, ರಾಗ ತಾಳ, ಲಯ ಬದ್ಧವಾಗಿ ಭಜನೆ ಹಾಡುವ ವಿಧಾನ, ಯೋಗಾಭ್ಯಾಸ, ತಜ್ಞರಿಂದ ಉಪನ್ಯಾಸ, ಚರ್ಚೆ, ಮುಕ್ತ ಸಂವಾದ ಇತ್ಯಾದಿ ವೈವಿದ್ಯಮಯ ಚಟುವಟಿಕೆಗಳೊಂದಿಗೆ ವ್ಯಕ್ತಿತ್ವ ವಿಕಸನಕ್ಕೂ ಪ್ರೋತ್ಸಾಹ ನೀಡಲಾಗುತ್ತದೆ.
 

ಚುನಾವಣಾ ಫಲಿತಾಂಶ 2019 | ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ 2019 ಚುನಾವಣೆಗೆ ಸಂಬಂಧಿಸಿದ ಸಮಗ್ರ ಸುದ್ದಿ, ಮಾಹಿತಿ, ವಿಶ್ಲೇಷಣೆ ಇಲ್ಲಿ ಲಭ್ಯ.

ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರತಿಕ್ರಿಯಿಸಿ (+)