ಸೋಮವಾರ, ಡಿಸೆಂಬರ್ 6, 2021
23 °C

ಭಾರತ ಬ್ಯಾಂಕ್ ಸ್ಥಾಪಕ ಜಯ ಸಿ. ಸುವರ್ಣ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Jaya C Suvarna

ಮಂಗಳೂರು: ಭಾರತ ಬ್ಯಾಂಕ್ ಸ್ಥಾಪಕ, ಬಿಲ್ಲವ ಮುಖಂಡ ಜಯ ಸಿ. ಸುವರ್ಣ (75) ಬುಧವಾರ ಮುಂಬೈಯಲ್ಲಿ ನಿಧನರಾದರು.

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಮೂಲ್ಕಿಯ ಸುವರ್ಣ ಅವರು ಮುಂಬೈನಲ್ಲಿ ನೆಲೆಸಿದ್ದರು. ಅವರು ಗೋರೆಗಾಂವ್‌‌ನ ಜಯಪ್ರಕಾಶ್ ಹೋಟೆಲ್ ಮಾಲೀಕ, ಸಾಯಿ ವೆಜ್ ಗ್ರೂಪ್ ಆಫ್ ಹೋಟೆಲ್‌ಗಳ ಸ್ಥಾಪಕರೂ ಆಗಿದ್ದಾರೆ.

ಮುಂಬೈನಲ್ಲಿ ಹೋಟೆಲ್ ಉದ್ಯಮದ ಜೊತೆ ಅಲ್ಲಿನ ಹಾಗೂ ಕರಾವಳಿಯ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು.

ರಾಷ್ಟ್ರೀಯ ಬಿಲ್ಲವ ಮಹಾಮಂಡಳದ ಸ್ಥಾಪಕ ಅಧ್ಯಕ್ಷರಾಗಿದ್ದರು. ಮಂಗಳೂರಿನ ಕುದ್ರೋಳಿ ಗೋಕರ್ಣನಾಥ ದೇಗುಲದ ಅಭಿವೃದ್ಧಿ ಹಾಗೂ ಇತರ ಕಾರ್ಯಗಳಿಗೆ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಅವರ ಜೊತೆ ಕೈ ಜೋಡಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು