ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಕ್ಷಿಣ ಕನ್ನಡ | ‘ವಿವಿಯಲ್ಲಿ ಭರತನಾಟ್ಯ ಪೀಠ ರಚಿಸಿ’

ನೃತ್ಯೋಪಾಸನಾ ಕಲಾ ಕೇಂದ್ರದ ತರಗತಿ ಉದ್ಘಾಟನೆ
Last Updated 5 ಮೇ 2022, 16:15 IST
ಅಕ್ಷರ ಗಾತ್ರ

ಮಂಗಳೂರು: ಪುತ್ತೂರಿನ ನೃತ್ಯೋಪಾಸನಾ ಕಲಾ ಕೇಂದ್ರದ ಮಂಗಳೂರು ಶಾಖೆಯ ಉದ್ಘಾಟನೆ ನಗರದ ಕಾರ್‌ಸ್ಟ್ರೀಟ್‌ನ ದಯಾನಂದ ಪೈ, ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ನಡೆಯಿತು.

ನಾಟ್ಯರಾಣಿ ಶಾಂತಲಾ ಪ್ರಶಸ್ತಿ ಪುರಸ್ಕೃತ ನೃತ್ಯಗುರು ವಿದ್ವಾನ್ ಉಳ್ಳಾಲ ಮೋಹನ ಕುಮಾರ್ ಕೇಂದ್ರ ಉದ್ಘಾಟಿಸಿದರು. ‘ಭಾರತೀಯ ಕಲೆ, ಸಂಸ್ಕೃತಿಯನ್ನು ಉಳಿಸುವ ನಿಟ್ಟಿನಲ್ಲಿ ಭರತನಾಟ್ಯದ ಕೊಡುಗೆ ಅಪಾರವಾದದ್ದು’ ಎಂದರು.

ಆ್ಯಡ್ ಐಡಿಯಾ ಮಂಗಳೂರಿನ ಮುಖ್ಯಸ್ಥ ವೇಣು ಶರ್ಮ ಮಾತನಾಡಿ, ‘ಕೇಂದ್ರ ಸರ್ಕಾರ ಹೊಸ ಶಿಕ್ಷಣ ನೀತಿಯಲ್ಲಿ ಕಲೆ, ಸಂಸ್ಕೃತಿ ಕಲಿಕೆಗೆ ಹೆಚ್ಚಿನ ಆದ್ಯತೆ ಇದೆ. ಮಂಗಳೂರು ವಿಶ್ವವಿದ್ಯಾಲಯವು ಭರತನಾಟ್ಯದ ಸಮಗ್ರ ಕಲಿಕೆಯ ಭಾಗವಾಗಿ ಭರತನಾಟ್ಯ ಪೀಠ ರಚಿಸಲು ಮುಂದಾಗಬೇಕು’ ಎಂದು ಅಭಿಪ್ರಾಯಪಟ್ಟರು.

ಮಂಗಳೂರು ನಗರ ಪೊಲೀಸ್ ಕಮಿಷನರ್ ಶಶಿಕುಮಾರ್, ಕಾರ್‌ಸ್ಟ್ರೀಟ್ ಪ್ರಥಮ ದರ್ಜೆ ಕಾಲೇಜು ಉಪ ಪ್ರಾಂಶುಪಾಲ ಡಾ.ಜಯಕರ ಭಂಡಾರಿ ಇದ್ದರು. ಕಾಲೇಜಿನ ಪ್ರಾಂಶುಪಾಲ ಪ್ರೊ. ರಾಜಶೇಖರ ಹೆಬ್ಬಾರ್ ಅಧ್ಯಕ್ಷತೆ ವಹಿಸಿದ್ದರು. ನೃತ್ಯಗುರು ವಿದ್ವಾನ್ ಉಳ್ಳಾಲ ಮೋಹನ ಕುಮಾರ್ ಮತ್ತು ಅವರ ಪುತ್ರಿ ವಿದುಷಿ ರಾಜಶ್ರೀ ಅವರನ್ನು ಗೌರವಿಸಲಾಯಿತು. ನೃತ್ಯೋಪಾಸನಾ ಕಲಾಕೇಂದ್ರದ ನೃತ್ಯಗುರು ವಿದುಷಿ ಶಾಲಿನಿ ಆತ್ಮಭೂಷಣ್ ಮಾತನಾಡಿ, ಮಂಗಳೂರಿನಲ್ಲಿ ಪ್ರತಿ ಮಂಗಳವಾರ ಭರತನಾಟ್ಯ ನೃತ್ಯ ತರಗತಿ ನಡೆಸಲಾಗುವುದು ಎಂದರು. ಗಣೇಶ್ ಪ್ರಸಾದ್ ವಂದಿಸಿದರು. ಉಪನ್ಯಾಸಕಿ ವಿದ್ಯಾ ಎಸ್. ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT