ಶುಕ್ರವಾರ, ಜುಲೈ 30, 2021
25 °C

ಮಂಗಳೂರು ಶಾಸಕ ಭರತ್‌ ಶೆಟ್ಟಿಗೆ ಕೋವಿಡ್ ದೃಢ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಮಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಶಾಸಕ ಡಾ.ವೈ.ಭರತ್ ಶೆಟ್ಟಿ ಅವರಿಗೆ ಕೋವಿಡ್-19 ದೃಢವಾಗಿದೆ.

ಈ ಕುರಿತು ಟ್ವಿಟರ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಕೆಲವು ದಿನಗಳಿಂದ ಚಿಕಿತ್ಸೆಯಲ್ಲಿದ್ದು, ಚೇತರಿಸಿಕೊಳ್ಳುತ್ತಿದ್ದೇನೆ ಎಂದು ತಿಳಿಸಿದ್ದಾರೆ.

'ನನಗೆ ಕೋವಿಡ್-19 ದೃಢಪಟ್ಟಿದೆ. ನಿಮ್ಮೆಲ್ಲರ ಶುಭ ಹಾರೈಕೆಗಳಿಂದ ನಾನು ಚೇತರಿಸಿಕೊಳ್ಳುತ್ತಿದ್ದೇನೆ. ಮುಂದೆಯೂ ಕೆಲ ದಿನಗಳು ಚಿಕಿತ್ಸೆ ಪಡೆದುಕೊಳ್ಳಬೇಕಾಗಬಹುದು. ಎಲ್ಲರೂ ಅಂತರ ಕಾಪಾಡಿಕೊಳ್ಳಬೇಕು, ಮನೆಯಿಂದ ಹೊರಗೆ ಬರುವಾಗ ಮಾಸ್ಕ್ ಧರಿಸಬೇಕು ಮತ್ತು ಕೈಗಳನ್ನು ಪದೇಪದೆ ತೊಳೆದುಕೊಳ್ಳಬೇಕು ಎಂದು ವಿನಂತಿಸುತ್ತೇನೆ. ನಿಮ್ಮ ಬಗ್ಗೆ ಮತ್ತು ನಿಮ್ಮ ಆಪ್ತರ ಬಗ್ಗೆ ಕಾಳಜಿ ವಹಿಸಿ' ಎಂದು ಭರತ್ ಶೆಟ್ಟಿ ವಿನಂತಿಸಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು