ಸೋಮವಾರ, ಮಾರ್ಚ್ 27, 2023
32 °C

ಮಂಗಳೂರಲ್ಲಿ ಬೀದರ್ ಮೂಲದ ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಳ್ಳಾಲ: ನಗರದ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಇಂಟರ್ನ್‌ಷಿಪ್ ಮಾಡುತ್ತಿದ್ದ ಎಂಬಿಬಿಎಸ್ ವಿದ್ಯಾರ್ಥಿನಿಯೊಬ್ಬರು ಭಾನುವಾರ ಸಂಜೆ ಕುತ್ತಾರ್‌ನಲ್ಲಿ ತಾವು ವಾಸಿಸುತ್ತಿದ್ದ ಅಪಾರ್ಟ್‌ಮೆಂಟ್‌ನಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೀದರ್‌ನ ಆನಂದ ನಗರದ ವಿಜಯಕುಮಾರ್ ಗಾಯಕವಾಡ್ ಪುತ್ರಿ ವೈಶಾಲಿ ಗಾಯಕ್‌ವಾಡ್ (25) ಮೃತ ವಿದ್ಯಾರ್ಥಿನಿ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲವಾದರೂ ವೈಯಕ್ತಿಕ ಕಾರಣಗಳ ಬಗ್ಗೆ ಪೊಲೀಸರು ಶಂಕಿಸಿದ್ದಾರೆ. ಗೆಳತಿ ಜೊತೆ ಅಪಾರ್ಟ್‌ಮೆಂಟ್‌ನಲ್ಲಿ ವಾಸಿಸುತ್ತಿದ್ದ ವೈಶಾಲಿ ಅವರು ಭಾನುವಾರ ಸಂಜೆ ಕೋಣೆಯಲ್ಲಿ ನೇಣಿಗೆ ಶರಣಾಗಿದ್ದಾರೆ.

ಉಳ್ಳಾಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಚಲಿಸುತ್ತಿದ್ದ ರೈಲಿನಿಂದ‌ ಬಿದ್ದು ಬಿಬಿಎಂಪಿ ಎಂಜಿನಿಯರ್ ಸಾವು

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು