ಭಾನುವಾರ, 25 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರು | ಬಿಕರ್ನಕಟ್ಟೆ ಶಾಲೆ ನೂತನ ಕೊಠಡಿ ಉದ್ಘಾಟನೆ

Published 18 ಡಿಸೆಂಬರ್ 2023, 5:16 IST
Last Updated 18 ಡಿಸೆಂಬರ್ 2023, 5:16 IST
ಅಕ್ಷರ ಗಾತ್ರ

ಮಂಗಳೂರು: ಪದವು ಬಿಕರ್ನಕಟ್ಟೆಯ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕೊಠಡಿಗಳನ್ನು ಶಾಸಕ ಡಿ.ವೇದವ್ಯಾಸ ಕಾಮತ್ ಅವರು ಶನಿವಾರ ಲೋಕಾರ್ಪಣೆಗೊಳಿಸಿದರು.

ಬಳಿಕ ನಡೆದ ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, 'ಈ ಎರಡು ನೂತನ ಕೊಠಡಿಗಳನ್ನು ವಿವೇಕ ಯೋಜನೆ ಅಡಿ ₹40 ಲಕ್ಷ ಅನುದಾನದಲ್ಲಿ ನಿರ್ಮಿಸಲಾಗಿದೆ. ಶಾಲೆಯ ಪ್ರಾಂಗಣದಲ್ಲಿ ಇಂಟರ್ ಲಾಕ್ ಅಳವಡಿಸಲು ಮತ್ತು ವೇದಿಕೆ ದುರಸ್ತಿಗೆ ₹ 15 ಲಕ್ಷ ಮಂಜೂರಾಗಿದೆ' ಎಂದರು.

ಶಾಲೆಯಲ್ಲಿ ಅಧ್ಯಾಪಕಿಯಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತಿಯಾಗಿರುವ ವೀಣಾ ಪ್ರಭು ಅವರಿಗೆ ಗುರುವಂದನೆ ಸಲ್ಲಿಸಲಾಯಿತು. ಶಾಲೆಯ ಹಿತೈಷಿ ಮಹಮ್ಮದ್ ನೌಷಾದ್ ಅವರನ್ನು ಸನ್ಮಾನಿಸಲಾಯಿತು.
ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಅಧ್ಯಕ್ಷತೆ ವಹಿಸಿದ್ದರು. ಪಾಲಿಕೆ‌ ಸದಸ್ಯೆ ಕಾವ್ಯಾ ನಟರಾಜ್ ಆಳ್ವ, ವೈದ್ಯ ಡಾ.ಗಣೇಶ್ ಕುಮಾರ್, ಸಿವಿಲ್ ಎಂಜಿನಿಯರ್ ಗುರುರಾಜ್ ಶೆಣೈ, ಉದ್ಯಮಿ ಯೋಗೀಶ್ ಶೆಣೈ, ಶಾಲಾ ಎಸ್ ಡಿಎಂಸಿ ಅಧ್ಯಕ್ಷೆ ಜಯಲತಾ ಅಮೀನ್,ಹಳೆ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷ ಸಂಜೀವ ಭಾಗವಹಿಸಿದ್ದರು.

ಮುಖ್ಯೋಪಾಧ್ಯಾಯಿನಿ ರಾಜೀವಿ ವರದಿ ವಾಚಿಸಿದರು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಶೈಲಜಾ ಸುರೇಶ್ ಸ್ವಾಗತಿಸಿದರು. ಕಾರ್ಯದರ್ಶಿ ರಮೇಶ್ ಕಂಡೆಟ್ಟು ವಂದಿಸಿದರು. ಅಧ್ಯಾಪಕರಾದ ‌ಶೀಲಾವತಿ ಹಾಗೂ ಚಂದ್ರಶೇಖರ್ ಕಾರ್ಯಕ್ರಮ ನಿರೂಪಿಸಿದರು.

ಜಯಲತಾ ಅಮೀನ್ ಶಾಲಾ ಧ್ವಜಾರೋಹಣ ನೆರವೇರಿಸಿದರು. ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಆರ್.ಈಶ್ವರ್, ಸಮೂಹ ಸಂಪನ್ಮೂಲ ಅಧಿಕಾರಿ ಕುಮುದಿನಿ, ವಕೀಲ ಮಹೇಶ್ ಜೋಗಿ, ನಿವೃತ್ತ ಶಿಕ್ಷಕ ಮಹಾಬಲ ಕುಲಾಲ್, ಬಹುಮಾನ ವಿತರಿಸಿದರು. ಹಳೆ ವಿದ್ಯಾರ್ಥಿ ಸಂಘದ ಜತೆ ಕಾರ್ಯದರ್ಶಿ ದೇವದಾಸ್ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT