ಭಾನುವಾರ, 3 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಪ್ಪಿನಂಗಡಿ | ಪ್ರತೀಕಾರಕ್ಕಾಗಿ ಬೈಕ್‌ ಸುಟ್ಟ ಆರೋಪಿ ಬಂಧನ

Published 11 ಜನವರಿ 2024, 15:58 IST
Last Updated 11 ಜನವರಿ 2024, 15:58 IST
ಅಕ್ಷರ ಗಾತ್ರ

ಉಪ್ಪಿನಂಗಡಿ: ಹಿರೇಬಂಡಾಡಿ ಗ್ರಾಮದಲ್ಲಿ ದ್ವಿಚಕ್ರ ವಾಹನವೊಂದಕ್ಕೆ ಜ.6ರಂದು ರಾತ್ರಿ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. ಪ್ರೀತಿಸಿದ ಯುವತಿ ಬೇರೊಬ್ಬನ ಜೊತೆ ಮದುವೆಯಾಗಿದ್ದನ್ನು ಸಹಿಸದೇ ಯುವಕ ಆಕೆಯ ಪತಿಯ ಬೈಕ್‌ ಸುಟ್ಟಿದ್ದಾನೆ ಎಂದು ತನಿಖೆಯಿಂದ ಗೊತ್ತಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಉಪ್ಪಿನಂಗಡಿ ಗ್ರಾಮದ ನಿನ್ನಿಕಲ್ಲು ಪಾದಾಳದ ಸಂದೀಪ್ ಬಂಧಿತ ಆರೋಪಿ.

‘ಆರೋಪಿಯು ಯುವತಿಯೊಬ್ಬಳನ್ನು ಪ್ರೀತಿಸಿದ್ದ. ಆದರೆ ಆತನದು ಏಕಮುಖ ಪ್ರೀತಿಯಾಗಿತ್ತು. ಯುವತಿಗೆ ಜ.3ರಂದು ವಿವಾಹವಾಗಿತ್ತು. ತಾನು ಪ್ರೀತಿಸಿದ ಯುವತಿಯನ್ನು ಮದುವೆಯಾದ ವ್ಯಕ್ತಿಯ ಮೇಲೆ ಆರೋಪಿಗೆ ಸಿಟ್ಟಿತ್ತು. ಯುವತಿ ಜ.6ರಂದು ಗಂಡನ ಜೊತೆ ತವರಿಗೆ ಬಂದಿದ್ದಳು. ಅಂದು ರಾತ್ರಿ ಅವರ ಮನೆಯ ಸಮೀಪ ಬೈಕ್‌ ಹೊತ್ತಿ ಉರಿಯುತ್ತಿದ್ದುದನ್ನು ಸಂಬಂಧಿಯೊಬ್ಬರು ಗಮನಿಸಿದ್ದರು. ಅದು ವರನ ಬೈಕ್‌ ಎಂದು ಬಳಿಕ ಗೊತ್ತಾಗಿತ್ತು. ಅದನ್ನು ಮನೆಯಿಂದ 100 ಮೀ ದೂರಕ್ಕೆ ಒಯ್ದು ಬೆಂಕಿ ಹಚ್ಚಲಾಗಿತ್ತು. ಈ ಬಗ್ಗೆ ವರ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದರು.

‘ತಾನು ಪ್ರೀತಿಸಿದ್ದ ಯುವತಿಯನ್ನು ಮದುವೆಯಾದ ವ್ಯಕ್ತಿಯ ಮೇಲಿನ ದ್ವೇಷದಿಂದ ಆತನ ಬೈಕ್‌ ಸುಟ್ಟುಹಾಕಿದ್ದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ’ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT