ಬುಧವಾರ, ಫೆಬ್ರವರಿ 1, 2023
18 °C

ಉಳ್ಳಾಲ| ರಸ್ತೆ ವಿಭಜಕಕ್ಕೆ ಗುದ್ದಿದ ಬೈಕ್: ಸವಾರ ಗಂಭೀರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಳ್ಳಾಲ(ದಕ್ಷಿಣ ಕನ್ನಡ): ಇಲ್ಲಿಗೆ ಸಮೀಪದ ತೊಕ್ಕೊಟ್ಟುವಿನಿಂದ ಕುತ್ತಾರು ಕಡೆಗೆ ಬರುತ್ತಿದ್ದ ಬೈಕ್ ಶ್ರೀ ರಾಜರಾಜೇಶ್ವರಿ ಸಿದ್ದಿವಿನಾಯಕ ದೇವಸ್ಥಾನ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಶನಿವಾರ ತಡರಾತ್ರಿ ರಸ್ತೆ ವಿಭಜಕಕ್ಕೆ  ಡಿಕ್ಕಿ ಹೊಡೆದಿದೆ.

ಬೈಕ್ ಸವಾರ ಚೆಂಬುಗುಡ್ಡೆ ಕೆರೆಬೈಲು ನಿವಾಸಿ ಭೂಷಣ್ ರೈ (20) ಗಾಯಗೊಂಡಿದ್ದಾರೆ.

ಕಲ್ಲಾಪು ಬುರ್ದುಗೋಳಿ ಕೋಲದಲ್ಲಿ ಭಾಗವಹಿಸಿದ್ದ ಇವರು ಬೈಕಿನಲ್ಲಿ ಕುತ್ತಾರಿನತ್ತ ಬರುವಾಗ ಅಪಘಾತ ಸಂಭವಿಸಿದ್ದು, ಭೂಷಣ್ ಇನ್ನೊಂದು  ರಸ್ತೆಯ ಬದಿಗೆ ಎಸೆಯಲ್ಪಟ್ಟಿದ್ದರು.

ತಲೆಗೆ ಗಂಭೀರ ಗಾಯಗೊಂಡು ರಸ್ತೆಯಲ್ಲಿ ಕೆಲಕಾಲ ಬಿದ್ದಿದ್ದ ಅವರನ್ನು ತೊಕ್ಕೊಟ್ಟು ಕಡೆಗೆ ತೆರಳುತ್ತಿದ್ದ ಕೇರಳದ ಆಲ್ಟೋ ಕಾರಿನಲ್ಲಿದ್ದ ಐವರ ತಂಡ ತಕ್ಷಣ ಆಸ್ಪತ್ರೆಗೆ ದಾಖಲಿಸುವ ಮೂಲಕ ಮಾನವೀಯತೆ ಮೆರೆದಿದೆ. ತಲೆಗೆ ಗಾಯವಾಗಿರುವ ಅವರನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೈಕ್ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ.

ಮಂಗಳೂರು ದಕ್ಷಿಣ ಸಂಚಾರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು