ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

7 ರಂದು ಕುದ್ರೋಳಿಯಿಂದ ಬೈಕ್ ರ‍್ಯಾಲಿ

ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯರ ಹೆಸರಿಡಲು ಆಗ್ರಹ
Last Updated 1 ಡಿಸೆಂಬರ್ 2020, 16:41 IST
ಅಕ್ಷರ ಗಾತ್ರ

ಮಂಗಳೂರು: ಇಲ್ಲಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯ ಹೆಸರು ಇಡುವಂತೆ ಆಗ್ರಹಿಸಿ ಬಿಲ್ಲವ ಬ್ರಿಗೇಡ್ ನೇತೃತ್ವದಲ್ಲಿ ಕೋಟಿ-ಚೆನ್ನಯ ಸಂಚಾಲನಾ ಸಮಿತಿಯ ಸಹಯೋಗದೊಂದಿಗೆ ವಿವಿಧ ಸಂಘಟನೆಗಳ ಸಹಕಾರದಲ್ಲಿ ಇದೇ 7ರಂದು ಬೈಕ್ ರ‍್ಯಾಲಿ ಹಮ್ಮಿಕೊಳ್ಳಲಾಗಿದೆ.

ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ ಸಂಚಾಲನಾ ಸಮಿತಿ ಪ್ರಧಾನ ಸಂಚಾಲಕ ಸತ್ಯಜಿತ್ ಸುರತ್ಕಲ್, ಅಂದು ಬೆಳಿಗ್ಗೆ 10 ಗಂಟೆಗೆ ಕುದ್ರೋಳಿ ಗೋಕರ್ಣನಾಥೇಶ್ವರ ಕ್ಷೇತ್ರದಿಂದ ಹೊರಡುವ ಬೈಕ್ ರ‍್ಯಾಲಿ ಬಜ್ಪೆ ಕೆಂಜಾರಿನ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದವರೆಗೆ ಸಾಗಲಿದೆ ಎಂದರು.

ಬೈಕ್ ರ‍್ಯಾಲಿಯಲ್ಲಿ ಕನಿಷ್ಠ 500 ಮಂದಿ ಭಾಗವಹಿಸುವ ನಿರೀಕ್ಷೆ ಇದೆ. ಭಾಗವಹಿಸವವರು ಮಾಸ್ಕ್ ಧರಿಸುವುದು ಹಾಗೂ ಹೆಲ್ಮೆಟ್ ಹಾಕುವುದು ಕಡ್ಡಾಯವಾಗಿದೆ ಎಂದು ಹೇಳಿದರು.

ಗ್ರಾಮ ಪಂಚಾಯಿತಿಯಲ್ಲಿ ಆದ ನಿರ್ಣಯ, 2019ರ ಜನವರಿ 30ರಂದು ನಡೆದ ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ವಿಮಾನ ನಿಲ್ದಾಣಕ್ಕೆ ಕೋಟಿ-ಚೆನ್ನಯ ಹೆಸರಿಡಲು ಸರ್ವಾನುಮತದಿಂದ ನಿರ್ಣಯ ಮಾಡಲಾಗಿದೆ. ಈ ಬಗ್ಗೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಆದರೆ, ರಾಜ್ಯ ಸರ್ಕಾರದಿಂದ ಅದು ವಾಪಸಾಗಿದೆ. ರಾಜ್ಯ ಸರ್ಕಾರ ಈ ನಿರ್ಣಯವನ್ನು ಅಂಗೀಕರಿಸಿ ಸೂಕ್ತ ಕ್ರಮಕ್ಕಾಗಿ ಕೇಂದ್ರ ಸರ್ಕಾರಕ್ಕೆ ಕಳುಹಿಸಬೇಕು ಎಂದು ಒತ್ತಾಯಿಸಿದರು.

ಸಮಿತಿಯ ಉಪಾಧ್ಯಕ್ಷ ಸೂರಜ್ ಕಲ್ಯ, ಬಿಲ್ಲವ ಬ್ರಿಗೇಡ್‌ನ ಅಧ್ಯಕ್ಷ ಜೀವನ್ ಪೂಜಾರಿ, ಸ್ಥಾಪಕ ಅಧ್ಯಕ್ಷ ಅವಿನಾಶ್ ಸುವರ್ಣ, ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಸನಿಲ್, ಸಂಘಟನಾ ಕಾರ್ಯದರ್ಶಿ ಅಶ್ವಥ್ ಉಪ್ಪಳ ಅವರೂ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT