ಗುರುವಾರ, 18 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೈಕ್‌ನಿಂದ ಬಿದ್ದು ಗಾಯಗೊಂಡ ವ್ಯಕ್ತಿ ತಿಂಗಳ ಬಳಿಕ ಸಾವು

Published 21 ಜೂನ್ 2024, 5:08 IST
Last Updated 21 ಜೂನ್ 2024, 5:08 IST
ಅಕ್ಷರ ಗಾತ್ರ

ಮಂಗಳೂರು: ಬೈಕಿನಲ್ಲಿ ಸಾಗುತ್ತಿದ್ದಾಗ ಕುಲಶೇಖರದಲ್ಲಿ ಉರುಳಿಬಿದ್ದು ತಿಂಗಳ ಹಿಂದೆ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಬುಧವಾರ ಮೃತಪಟ್ಟಿದ್ದಾರೆ.

‘ಕುಲಶೇಖರದ ನಿಖಿಲ್‌ ಮೃತರು. ಅವರು ತಮ್ಮ ಮನೆ ಕಡೆಗೆ ಮೇ 22ರಂದು ಬೈಕ್‌ ಚಲಾಯಿಸಿಕೊಂಡು ಹೋಗುತ್ತಿದ್ದಾಗ ನಿಯಂತ್ರಣ ತಪ್ಪಿ ಬಿದ್ದಿದ್ದರು. ಅವರ ಮಣಿಗಂಟಿಗೆ ಗಾಯವಾಗಿತ್ತು. ಸ್ಥಳದಲ್ಲಿದ್ದ ಸಾರ್ವಜನಿಕರು ಅವರನ್ನು ಉಪಚರಿಸಿ ಮನೆಗೆ ಕಳುಹಿಸಿದ್ದರು. ಜೂನ್‌ 13ರಂದು ಅವರ ಗಾಯ ಉಲ್ಬಣಗೊಂಡಿದ್ದು, ವೆನ್ಲಾಕ್‌ ಆಸ್ಪತ್ರೆಯಲ್ಲಿ ಹೊರರೋಗಿಯಾಗಿ ಚಿಕಿತ್ಸೆ ಪಡೆದಿದ್ದರು. ನೋವು ಹೆಚ್ಚಾಗಿದ್ದರಿಂದ ಜೂನ್‌ 15ರಂದು ಉಜಿರೆಯ ಎಸ್‌ಡಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಬಳಿಕವೂ ನೋವು ಕಡಿಮೆಯಾಗದ ಕಾರಣ ಜೂನ್‌ 16ರಂದು ವೆನ್ಲಾಕ್‌ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದರು’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ನಿಖಿಲ್  ಸಂಬಂಧಿ ಆಕಾಶ್‌ ಎಂಬುವರು ದೂರು ನೀಡಿದ್ದು ನಗರದ ಸಂಚಾರ ದಕ್ಷಿಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT