ಬೈಕ್, ದೇವಸ್ಥಾನದ ಹುಂಡಿ ಕಳವು; ವಿಎಚ್‌ಪಿ ಸಂಚಾಲಕನ ಬಂಧನ

ಉಳ್ಳಾಲ: ದೇವಸ್ಥಾನದ ಕಾಣಿಕೆ ಡಬ್ಬಿ ಹಾಗೂ ಬೈಕ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ ಸಂಚಾಲಕನನ್ನು ಕೊಣಾಜೆ ಪೊಲೀಸರು ಭಾನುವಾರ ಮಧ್ಯರಾತ್ರಿ ಬಂಧಿಸಿದ್ದಾರೆ.
ಮೊಂಟೆಪದವು ನಿವಾಸಿ ತಾರನಾಥ್ ಮೋಹನ್ ಬಂಧಿತ ಆರೋಪಿ. ಮಂಜನಾಡಿ ದೇವಸ್ಥಾನದಿಂದ ಕಾಣಿಕೆ ಡಬ್ಬಿ ಕಳವಾಗಿತ್ತು. ಅಲ್ಲದೇ ಮೊಂಟೆಪದವು ಬಳಿಯ ಮೆನೆಯೊಂದರಿಂದ ಬೈಕ್ ಕಳವು ಮಾಡಲಾಗಿತ್ತು. ಈ ಕುರಿತು ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳಿಂದ ದೊರೆತ ಮಾಹಿತಿ ಆಧಾರದಲ್ಲಿ ಭಾನುವಾರ ಮಧ್ಯರಾತ್ರಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.