ಶುಕ್ರವಾರ, ಜನವರಿ 27, 2023
19 °C

ಕುತ್ತಾರು ಅಪಘಾತ: ಗಾಯಾಳು ಮಿದುಳು ನಿಷ್ಕ್ರಿಯ, ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಳ್ಳಾಲ (ದಕ್ಷಿಣ ಕನ್ನಡ): ಶನಿವಾರ ತಡರಾತ್ರಿ ಕುತ್ತಾರು ದೇವಸ್ಥಾನ ಬಳಿ ನಡೆದ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ತೊಕ್ಕೊಟ್ಟು ಸೇವಂತಿಗುತ್ತು ನಿವಾಸಿ ಭೂಷಣ್ ರೈ ಮಿದುಳು ನಿಷ್ಕ್ರಿಯಗೊಂಡಿದ್ದು, ಅವರ ಅಂಗಾಂಗ ದಾನ ಮಾಡಲು ಕುಟುಂಬದವರು ನಿರ್ಧರಿಸಿದ್ದಾರೆ.


ಭೂಷಣ್ ರೈ

ರಸ್ತೆ ವಿಭಜಕಕ್ಕೆ ಬೈಕ್ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡ ಭೂಷಣ್ ರೈ ಅವರನ್ನು ದೇರಳಕಟ್ಟೆಯ ಯೆನೆಪೋಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದ ಅವರನ್ನು ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿನ ವೈದ್ಯರು ಗಾಯಾಳುವಿನ ಮಿದುಳು ನಿಷ್ಕ್ರಿಯಗೊಂಡಿರುವುದಾಗಿ ತಿಳಿಸಿದ್ದರು.

ಸಂಜೆ 4 ಗಂಟೆ ನಂತರ ನಡೆದ ವೈದ್ಯಕೀಯ ಪರೀಕ್ಷೆ ಬಳಿಕ ಅಂಗಾಂಗ ದಾನ ನಡೆಸುವ ಕುರಿತು ಕುಟುಂಬಸ್ಥರು ಒಪ್ಪಿಗೆ ಸೂಚಿಸಿದರು. ಭೂಷಣ್ ಅವರ ಸಹೋದರಿಯ ವಿವಾಹ ಎರಡು ವಾರಗಳ ಹಿಂದೆಯಷ್ಟೇ ನೆರವೇರಿತ್ತು. ತಂದೆ ಮಾರಪ್ಪ ರೈ ವರ್ಷದ ಹಿಂದೆಯಷ್ಟೇ ಸಾವನ್ನಪ್ಪಿದ್ದರು. ಮೃತ ಭೂಷಣ್ ತಾಯಿ ಜತೆಗೆ ನೆಲೆಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು