ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರ ಚಳವಳಿಯ ಬಗ್ಗೆ ಸಮಗ್ರ ದಾಖಲೀಕರಣ ನಡೆಯಬೇಕು, ಆಗ ಮಾತ್ರ ಭವಿಷ್ಯದ ಪೀಳಿಗೆಗೆ ಈ ಚಳವಳಿಯ ಒಳನೋಟ ಕಟ್ಟಿಕೊಡಲು ಸಾಧ್ಯವಾಗುತ್ತದೆ ಎಂದು ನಿವೃತ್ತ ಪ್ರಾಂಶುಪಾಲ ಉದಯಕುಮಾರ್ ಇರ್ವತ್ತೂರು ಹೇಳಿದರು.

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್ಸಿಡಿಸಿಸಿ), ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಆಶ್ರಯದಲ್ಲಿ ಸೋಮವಾರ ಇಲ್ಲಿ ನಡೆದ ದಿ. ಮೊಳಹಳ್ಳಿ ಶಿವರಾವ್ ಅವರ 145ನೇ ಜನ್ಮದಿನಾಚರಣೆಯಲ್ಲಿ ಅವರು ಮಾತನಾಡಿದರು.

ಕರಾವಳಿ ಜಿಲ್ಲೆಗಳು ಅಭಿವೃದ್ಧಿಯಲ್ಲಿ ಮುಂದುವರಿಯಲು ಹಲವು ಮಹನೀಯರು ಅಡಿಗಲ್ಲು ಹಾಕಿದ್ದಾರೆ. ಅವರಲ್ಲಿ ಶಿವರಾಯರೂ ಒಬ್ಬರು. ಮೊಳಹಳ್ಳಿ ಶಿವರಾಯರು ಸಹಕಾರಿ ಕ್ಷೇತ್ರದ ಪಿತಾಮಹ. ಸಹಕಾರಿ ಚಳವಳಿ, ಶಿಕ್ಷಣ, ಸ್ಥಳೀಯ ಆಡಳಿತ ಎಲ್ಲವೂ ಅವರಿಗೆ ಸಮಾನ ಪ್ರಾಮುಖ್ಯವಾಗಿತ್ತು. ಸಹಕಾರ ಸಂಸ್ಥೆಗಳಂತೆ ಶಿಕ್ಷಣ ಸಂಸ್ಥೆಗಳ ಹುಟ್ಟಿಗೆ ಕಾರಣರಾದವರು ಅವರು. ವಿದ್ಯಾರ್ಥಿ ದೆಸೆಯಲ್ಲಿ ಸಹಕಾರದ ಕಲ್ಪನೆ ಮೂಡಿಸುವ ಉದ್ದೇಶದಿಂದ ಕಾಲೇಜುಗಳಲ್ಲಿ ವಿದ್ಯಾರ್ಥಿ ಸಹಕಾರಿ ಸಂಸ್ಥೆಗಳನ್ನು ರಚಿಸಿದ್ದರು ಎಂದರು.

ಅಧ್ಯಕ್ಷತೆ ವಹಿಸಿದ್ದ ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಎನ್. ರಾಜೇಂದ್ರಕುಮಾರ್ ಮಾತನಾಡಿ, ‘ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಹಕಾರಿ ಕ್ಷೇತ್ರ ಪ್ರಬಲವಾಗಿ ಬೆಳೆದು ನಿಲ್ಲಲು ಮೊಳಹಳ್ಳಿ ಶಿವರಾವ್ ಅವರು ಹಾಕಿದ ತಳಪಾಳ ಕಾರಣ. ಅವರ ಮಾರ್ಗದರ್ಶನದಂತೆ ನಾವು ಮುನ್ನಡೆಯುತ್ತಿದ್ದೇವೆ. ಶಿವರಾವ್ ಅವರು ಬೇರೆ ಬೇರೆ ಕ್ಷೇತ್ರಗಳಲ್ಲಿ ಕೆಲಸ ಮಾಡಿದ್ದರೂ, ಸಹಕಾರಿ ಕ್ಷೇತ್ರದವರಾದ ನಾವು ಮಾತ್ರ ಅವರ ಸ್ಮರಣೆ ಮಾಡುತ್ತೇವೆ’ ಎಂದರು.

ಜಿಲ್ಲೆಯ ರೈತರು ನಿಷ್ಠಾವಂತರಾಗಿದ್ದು, 28 ವರ್ಷಗಳಿಂದ ಕೃಷಿ ಸಾಲವನ್ನು ಶೇ 100ರಷ್ಟು ಮರುಪಾವತಿ ಮಾಡುತ್ತಿದ್ದಾರೆ. ಹಣಕಾಸಿನ ಮುಗ್ಗಟ್ಟಿನಿಂದ ಯಾವುದೇ ರೈತ ಆತ್ಮಹತ್ಯೆ ಮಾಡಿಕೊಂಡಿಲ್ಲ. ಕೃಷಿ ಸಾಲದಿಂದ ಸಹಕಾರಿ ಬ್ಯಾಂಕ್ಗಳಿಗೆ ಶೇ2ರಷ್ಟು ನಷ್ಟವಾಗುತ್ತಿದೆ. ವಾಣಿಜ್ಯ ಸಾಲ ನೀಡಿ ಅದನ್ನು ಸರಿದೂಗಿಸಲಾಗುತ್ತಿದೆ. ಎಂದರು.

ರಾಜೇಂದ್ರಕುಮಾರ್ ಅವರನ್ನು ಸನ್ಮಾನಿಸಲಾಯಿತು. ಜಿಲ್ಲಾ ಸಹಕಾರಿ ಯೂನಿಯನ್ ಹೊರತಂದ ‘ಕರಾವಳಿ ಸಹಕಾರಿ’ ಮಾಸ ಪತ್ರಿಕೆ ಬಿಡುಗಡೆಗೊಳಿಸಲಾಯಿತು.

ಬ್ಯಾಂಕ್ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ , ಮುಡಾ ಅಧ್ಯಕ್ಷ ಸದಾಶಿವ ಉಳ್ಳಾಲ್, ಎಸ್ಸಿಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಟಿ.ಜಿ.ರಾಜಾರಾಮ ಭಟ್, ಭಾಸ್ಕರ್ ಎಸ್. ಕೋಟ್ಯಾನ್, ಎಂ. ವಾದಿರಾಜ ಶೆಟ್ಟಿ,
ದೇವಿಪ್ರಸಾದ್ ಶೆಟ್ಟಿ ಬೆಳಪು, ಎಸ್. ಬಿ. ಜಯರಾಮ ರೈ, ಮೋನಪ್ಪ ಶೆಟ್ಟಿ ಎಕ್ಕಾರು, ಎಂ. ಮಹೇಶ್ ಹೆಗ್ಡೆ, ಬಿ. ಅಶೋಕ್ ಕುಮಾರ್ ಶೆಟ್ಟಿ, ಜೈರಾಜ್ ಬಿ.ರೈ, ಕುಶಾಲಪ್ಪಗೌಡ ಪಿ., ನಬಾರ್ಡ್ ಡಿಜಿಎಂ ಸಂಗೀತಾ ಕರ್ತ, ಸಹಕಾರ ಸಂಘಗಳ ಉಪನಿಬಂಧಕರಾದ ರಮೇಶ್ ಎಚ್.ಎನ್, ಲಾವಣ್ಯ, ಎಸ್ಸಿಡಿಸಿಸಿ ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್ ಉಪಸ್ಥಿತರಿದ್ದರು.

ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೋಟ್ಟು ಸ್ವಾಗತಿಸಿದರು. ನಿರ್ದೇಶಕ ಹರೀಶ್ ಆಚಾರ್ಯ ವಂದಿಸಿದರು. ಎಸ್.ವಿ. ಹಿರೇಮಠ ನಿರೂಪಿಸಿದರು.

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರ ಕ್ಷೇತ್ರಕ್ಕೆ ಶಕ್ತಿ ತುಂಬಿದವರು ಶಿವರಾಯರು. ಅವರಿಂದ ಪ್ರೇರಿತರಾಗಿ ನಮ್ಮಂತಹ ಅದೆಷ್ಟೋ ಮಂದಿ ಈ ಕ್ಷೇತ್ರಕ್ಕೆ ಬಂದಿದ್ದಾರೆ.
ರವಿರಾಜ್ ಹೆಗ್ಡೆ ದ.ಕ. ಹಾಲು ಒಕ್ಕೂಟದ ಅಧ್ಯಕ್ಷ

ಹಲವಾರು ಸಹಕಾರ ಸಂಘಗಳ ಸ್ಥಾಪನೆಗೆ ಕಾರಣರಾದವರು ಮೊಳಹಳ್ಳಿ ಶಿವರಾಯರು. ಸಹಕಾರ ಕ್ಷೇತ್ರದ ಭದ್ರ ಬುನಾದಿ ಹೊಂದಿರುವ ಈ ನೆಲದ ಪರಂಪರೆಯನ್ನು ಯುವಜನರು ಮುಂದುವರಿಸಬೇಕು.
ಕಿಶೋರ್ಕುಮಾರ್ ಕೊಡ್ಗಿ ಕ್ಯಾಂಪ್ಕೊ ಅಧ್ಯಕ್ಷ

‘ಪ್ರತಿ ಗ್ರಾಮದಲ್ಲಿ ಸೇವೆ’:

ವಾಣಿಜ್ಯ ಬ್ಯಾಂಕ್ಗಳೂ ವಿಲೀನಗೊಳ್ಳುತ್ತಿವೆ. ಆದರೆ ಸಹಕಾರ ಸಂಘಗಳು ಪ್ರತಿ ಗ್ರಾಮಕ್ಕೆ ತೆರಳಿ ಜನರಿಗೆ ಸೇವೆ ನೀಡುತ್ತಿವೆ. ಭಾಷೆ ಸ್ಥಳೀಯ ಸಂಸ್ಕೃತಿ ಅರಿತವರು ಸಹಕಾರ ಕ್ಷೇತ್ರದಲ್ಲಿದ್ದಾರೆ. ನಾವು ವಾಣಿಜ್ಯ ಬ್ಯಾಂಕ್ಗಳಿಗೆ ಸರಿಸಮನಾಗಿ ಕೆಲಸ ಮಾಡಬೇಕು ಎಂದು ಎಂ.ಎನ್. ರಾಜೇಂದ್ರಕುಮಾರ್ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.