ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕಾಂಗ್ರೆಸ್ ಸಮಾವೇಶದ ಸ್ಥಳಕ್ಕೆ ಸಾಗುವ ಮಾರ್ಗ ಮಧ್ಯದಲ್ಲಿ ಅವರ ಕಾರನ್ನು ಅಡ್ಡಗಟ್ಟಲು ಯತ್ನಿಸಿದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ ವಿರುದ್ಧ ಪ್ರಕರಣ ದಾಖಲಿಸಿರುವುದನ್ನು ಖಂಡಿಸಿ, ಮುಖ್ಯಮಂತ್ರಿ ಬರುವಾಗ ಕಪ್ಪುಪಟ್ಟಿ ಹಿಡಿದು ಪ್ರತಿಭಟಿಸಲು 50ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಬೊಂದೆಲ್ ಬಳಿ ಸೇರಿದ್ದರು. ಅಲ್ಲಿಂದ ಹೊರಡುವಂತೆ ಪೊಲೀಸರು ಸೂಚಿಸಿದರು. ಇದೇ ವೇಳೆ ಸ್ಥಳಕ್ಕೆ ಬಂದ ನಗರ ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ಮತ್ತು ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು.

ಶಾಂತಿಯುತವಾಗಿ ಪ್ರತಿಭಟಿಸುವುದಾಗಿ ಕಾರ್ಯಕರ್ತರು ಹೇಳಿದಾಗ, ಅದಕ್ಕೆ ಕಮಿಷನರ್ ಒಪ್ಪಿಗೆ ಸೂಚಿಸಲಿಲ್ಲ. ನಂತರ ಕಾಂಗ್ರೆಸ್‌ಗೆ ಧಿಕ್ಕಾರ ಕೂಗಿದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು. ಇದಾಗಿ ಕೆಲ ನಿಮಿಷಗಳಲ್ಲಿ ಮುಖ್ಯಮಂತ್ರಿ ಅವರು ಇದೇ ಮಾರ್ಗವಾಗಿ ಅಡ್ಯಾರ್ ಕಡೆಗೆ ಸಾಗಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.