ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪುತ್ತೂರು: ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ವಿಶೇಷ ಕಾರ್ಯಕಾರಿಣಿ

Last Updated 1 ಆಗಸ್ಟ್ 2021, 2:08 IST
ಅಕ್ಷರ ಗಾತ್ರ

ಪುತ್ತೂರು: ‘ಕಾರ್ಯಕರ್ತರು ಸಂಘಟನಾ ಕಾರ್ಯದಲ್ಲಿ ಕ್ರಿಯಾಶೀಲವಾಗಿ ತೊಡಗಿಸಿಕೊಂಡು ಅವಕಾಶ ಸಿಕ್ಕಿದಾಗ ರಾಜಕೀಯ ಅಪೇಕ್ಷೆ ಪಡೆಯುವುದು ತಪ್ಪಲ್ಲ. ಆದರೆ ಪಕ್ಷನಿಷ್ಠೆ ಮತ್ತು ಬದ್ಧತೆಯನ್ನು ಪ್ರದರ್ಶನ ಮಾಡಿ ಹಿರಿಯರ ನಿರ್ದೇಶನ ಪಾಲಿಸಿದರೆ ಮಾತ್ರ ರಾಜಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಲು ಸಾಧ್ಯ’ ಎಂದು ಬಿಜೆಪಿ ವಿಭಾಗ ಸಹಪ್ರಭಾರಿ ಗೋಪಾಲಕೃಷ್ಣ ಹೇರಳೆ ಹೇಳಿದರು.

ಇಲ್ಲಿನ ಟೌನ್ ಬ್ಯಾಂಕ್ ಸಭಾಂಗಣದಲ್ಲಿ ಶುಕ್ರವಾರ ನಡೆದ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ವಿಶೇಷ ಕಾರ್ಯಕಾರಿಣಿ ಸಮಾರೋಪ ಸಮಾರಂಭದಲ್ಲಿ ಅವರು ಕಾರ್ಯಕರ್ತರಿಗೆ ಮಾರ್ಗದರ್ಶನ ನೀಡಿದರು.

ಸರ್ಕಾರದ ಕಾರ್ಯವೈಖರಿ ಜನಮನ್ನಣೆ ಗಳಿಸಿದ್ದು, ಭಾರತ ಮತ್ತೊಮ್ಮೆ ಜಾಗತಿಕ ಭೂಪಟದಲ್ಲಿ ಉನ್ನತ ಸ್ಥಾನದಲ್ಲಿ ನಿಲ್ಲುವಂತಾಗಿದೆ. ವೈದ್ಯಕೀಯ ಶಿಕ್ಷಣದಲ್ಲಿ ಹಿಂದುಳಿದ ವರ್ಗಕ್ಕೆ ಶೇ 27 ಮೀಸಲಾತಿ ಘೋಷಣೆ ಮಾಡಿರುವುದು ಮೋದಿ ಸರ್ಕಾರದ ಐತಿಹಾಸಿಕ ನಿರ್ಧಾರವಾಗಿದೆ. ಸರ್ಕಾರದ ಸಾಧನೆಗಳನ್ನು ಜನರಿಗೆ ಮುಟ್ಟಿಸುವ ಜತೆಗೆ ಸಾಮಾಜಿಕ ಕಾರ್ಯದಲ್ಲಿ ಮುಂಚೂಣಿಯಲ್ಲಿ ಕೆಲಸ ನಿರ್ವಹಿಸುವಂತಾಗಬೇಕು ಎಂದು ಸಲಹೆ ನೀಡಿದರು.

ಬಿಜೆಪಿ ಕಚೇರಿಯಲ್ಲಿ 13 ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದ ರುಕ್ಮಯ್ಯ ಇದ್ಪಾಡಿ ಅವರು ಇದೀಗ ಸಹಕಾರಿ ಸಂಸ್ಥೆಯಲ್ಲಿ ಉದ್ಯೋಗ ಪಡೆದುಕೊಂಡಿದ್ದು, ಪಕ್ಷಕ್ಕಾಗಿ ಕೆಲಸ ಮಾಡಿದ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಹಿಂದುಳಿದ ವರ್ಗಗಳ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಸಿ ನಾರಾಯಣ ರೆಂಜ ಅಧ್ಯಕ್ಷತೆ ವಹಿಸಿದ್ದರು. ಹಿಂದುಳಿದ ವರ್ಗಗಳ ಮೋರ್ಚಾ ರಾಜ್ಯ ಘಟಕದ ಕಾರ್ಯದರ್ಶಿ ವಿಠಲ ಪೂಜಾರಿ, ಜಿಲ್ಲಾ ಪ್ರಭಾರಿ ಭರತ್ ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹೇಶ್ ಜೋಗಿ ಇದ್ದರು.

ಮಹಿಳಾ ಮೋರ್ಚಾ ಅಧ್ಯಕ್ಷೆ ಶರಾವತಿ ವೈಯುಕ್ತಿಕಗೀತೆ ಹಾಡಿದರು. ಹಿಂದುಳಿದ ವರ್ಗಗಳ ಮೋರ್ಚಾ ಉಪಾಧ್ಯಕ್ಷ ಅಜಂತಾ ಪಿಲಾರ್ ಸ್ವಾಗತಿಸಿದರು. ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಅನಿಲ್ದಾಸ್ ವಂದಿಸಿದರು. ಪ್ರಧಾನ ಕಾರ್ಯದರ್ಶಿ ಮೋನಪ್ಪ ದೇವಸ್ಯ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT