ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೌರತ್ವ ಕಾಯ್ದೆ ಜಾಗೃತಿ: ಬಿಜೆಪಿಯಿಂದ ಸಹಿ ಸಂಗ್ರಹ‌ ಅಭಿಯಾನ

Last Updated 7 ಜನವರಿ 2020, 5:16 IST
ಅಕ್ಷರ ಗಾತ್ರ

ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆಯ ಬಗ್ಗೆ ಜಾಗೃತಿ ಮೂಡಿಸಲೆಂದು ಬಿಜೆಪಿ ಮಂಗಳವಾರ ಸುರತ್ಕಲ್‌ನಲ್ಲಿ ‘ಪೋಸ್ಟ್ ಕಾರ್ಡ್ ಅಭಿಯಾನ’ದ ಸಹಿ ಸಂಗ್ರಹ ಕಾರ್ಯಕ್ರಮ ನಡೆಸಿತು.

ಗೃಹ ಸಚಿವ ಬಸವರಾಜ ಬೊಮ್ಮಾಯಿ ಮಾತನಾಡಿ, ಅಲ್ಪಸಂಖ್ಯಾತರಿಗೆ ಹೆದರಿಕೆ ಹುಟ್ಟಿಸಿ, ಅವರಿಗೆ ತಪ್ಪು ಮಾಹಿತಿ ನೀಡುವ ಕೆಲಸ ಕಾಂಗ್ರೆಸ್‌ನಿಂದ ಆಗುತ್ತಿದೆ. ಇದನ್ನು ಸರಿಪಡಿಸುವ ಕೆಲಸ ಬಿಜೆಪಿ ಮಾಡುತ್ತಿದೆ. ಪ್ರಧಾನಿ ನರೇಂದ್ರ ಮೋದಿ, ಗೃಹಸಚಿವ ಅಮಿತ್ ಶಾ ಅವರು ಅನ್ಯಾಯ, ತುಳಿತಕ್ಕೊಳಗಾದವರಿಗೆ ಭದ್ರತೆ ಕೊಡಲು ಮುಂದಾದರೆ ಕಾಂಗ್ರೆಸ್‌ ನಾಯಕರುಅಡ್ಡಗಾಲು ಹಾಕುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬಿಜೆಪಿ ರಾಜ್ಯ ಘಟಕದ‌ ಅಧ್ಯಕ್ಷನಳಿನ್ ಕುಮಾರ್ ಕಟೀಲ್, ಶಾಸಕ ಡಾ. ವೈ. ಭರತ್ ಶೆಟ್ಟಿ, ಉತ್ತರ ಮಂಡಲದ ಅಧ್ಯಕ್ಷ ತಿಲಕ್ ರಾಜ್ ಕೃಷ್ಣಾಪುರ, ಜಿಲ್ಲಾ ಘಟಕದ‌ ಪ್ರಧಾನ ಕಾರ್ಯದರ್ಶಿ ಕಿಶೋರ್ ರೈ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT