ಬುಧವಾರ, 17 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಂಕನಾಡಿ ಗರೋಡಿಗೆ ಚೌಟ ಭೇಟಿ

Published 16 ಮಾರ್ಚ್ 2024, 2:44 IST
Last Updated 16 ಮಾರ್ಚ್ 2024, 2:44 IST
ಅಕ್ಷರ ಗಾತ್ರ

ಮಂಗಳೂರು: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಯೋಜನೆಗಳ ಲಾಭ ಪಡೆದವರನ್ನು ನಮ್ಮ ಮತದಾರರನ್ನಾಗಿ ಮಾಡಬೇಕು. ನಾವು ಜನರ ಬಳಿಗೆ ಹೋಗಿ ಮೋದಿಯವರ ಕಾರ್ಯದ ಬಗ್ಗೆ ತಿಳಿಸಬೇಕು ಎಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬೃಜೇಶ್ ಚೌಟ ಹೇಳಿದರು.

ಪಕ್ಷದ ಜಿಲ್ಲಾ ಕಚೇರಿಯಲ್ಲಿ ನಡೆದ ಚುನಾವಣಾ ನಿರ್ವಹಣಾ ಸಮಿತಿ ಮತ್ತು ಜಿಲ್ಲಾ ಪದಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ‘ಮೋದಿಯವರ ಸಾಧನೆ ತಿಳಿಸಿ, ಮತಗಳಾಗಿ ಪರಿವರ್ತಿಸುವ ದೊಡ್ಡ ಜವಾಬ್ದಾರಿ ನಮ್ಮ ಮೇಲಿದೆ’ ಎಂದರು.

ಶುಕ್ರವಾರ ಸಂಜೆ ಕಂಕನಾಡಿಯ ಬ್ರಹ್ಮ ಬೈದರ್ಕಳ ಗರಡಿಗೆ ಭೇಟಿ ನೀಡಿದ ಬೃಜೇಶ್, ದೇವರ ದರ್ಶನ ಪಡೆದರು. ನಾರಾಯಣ ಗುರು ಮತ್ತು ಮಹಾತ್ಮ ಗಾಂಧೀಜಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಗರೋಡಿ ದೈವಸ್ಥಾನ ಸಮಿತಿ ಅಧ್ಯಕ್ಷ ಚಿತ್ತರಂಜನ್, ಚೌಟ ಅವರನ್ನು ಬರಮಾಡಿಕೊಂಡರು.‌

ವಿಧಾನ ಪರಿಷತ್ ಮಾಜಿ ಸದಸ್ಯ ಬಾಲಕೃಷ್ಣ ಭಟ್ ಮನೆಗೆ ಭೇಟಿ ನೀಡಿದರು. ಆದಿಚುಂಚನಗಿರಿ ಶಾಖಾ ಮಠ ಕಾವೂರಿನ ಧರ್ಮಪಾಲನಾಥ ಸ್ವಾಮೀಜಿ ಭೇಟಿಯಾಗಿ ಆಶೀರ್ವಾದ ಪಡೆದರು. ಆರ್‌ಎಸ್‌ಎಸ್‌ ಮುಖಂಡ ಸುನಿಲ್ ಆಚಾರ್ ಮನೆಗೆ ತೆರಳಿ ಆಶೀರ್ವಾದ ಪಡೆದರು.

ಮಂಗಳೂರು: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಯೋಜನೆಗಳ ಲಾಭ ಪಡೆದವರನ್ನು ನಮ್ಮ ಮತದಾರರನ್ನಾಗಿ ಮಾಡಬೇಕು. ನಾವು ಜನರ ಬಳಿಗೆ ಹೋಗಿ ಮೋದಿಯವರ ಕಾರ್ಯದ ಬಗ್ಗೆ ತಿಳಿಸಬೇಕು ಎಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬೃಜೇಶ್ ಚೌಟ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT