ಭಾನುವಾರ, 14 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಉಚಿತ ಸಿಲಿಂಡರ್‌| ಉತ್ತರ ಪ್ರದೇಶದಲ್ಲಿ ನೀಡಿದ್ದ ಭರವಸೆ ಈಡೇರಿಸದ ಬಿಜೆಪಿ: ಕಾಂಗ್ರೆಸ್‌

ರಾಜ್ಯಸಭಾ ಸದಸ್ಯ ಜೈರಾಂ ರಮೇಶ್ ಆರೋಪ
Published 1 ಮೇ 2023, 20:18 IST
Last Updated 1 ಮೇ 2023, 20:18 IST
ಅಕ್ಷರ ಗಾತ್ರ

ಮಂಗಳೂರು: ‘ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಪ್ರತಿ ಕುಟುಂಬಕ್ಕೆ ವರ್ಷಕ್ಕೆ ಮೂರು ಅಡುಗೆ ಅನಿಲ‌ ಸಿಲಿಂಡರ್‌ಗಳನ್ನು ಉಚಿತವಾಗಿ ನೀಡುವುದಾಗಿ ಭರವಸೆ ನೀಡಿದೆ. ಉತ್ತರ ಪ್ರದೇಶದಲ್ಲಿ ಅವರು ನೀಡಿದ್ದ ಈ ಭರವಸೆ ಈಡೇರಿಸಿಲ್ಲ’ ಎಂದು ಕಾಂಗ್ರೆಸ್‌ ಮುಖಂಡ, ರಾಜ್ಯಸಭಾ ಸದಸ್ಯ ಜೈರಾಂ ರಮೇಶ್ ಹೇಳಿದರು.

ಇಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 'ಆಮ್‌ ಆದ್ಮಿ ಪಾರ್ಟಿ (ಎಎಪಿ), ಆಲ್‌ಇಂಡಿಯಾ ಮಜಿಲಿಸ್‌ ಇ ಇತ್ಹೇದುಲ್‌ ಮುಸ್ಲಿಮೀನ್‌ (ಎಐಎಂಐಎಂ), ಸೋಷಿಯಲ್‌ ಡೆಮಾಕ್ರೆಟಿಕ್‌ ಪಾರ್ಟಿ ಆಫ್‌ ಇಂಡಿಯಾ (ಎಸ್‌ಡಿಪಿಐ) ಬಿಜೆಪಿಯ ಬಿ-ಟೀಮ್‌ಗಳು. ಜೆಡಿಎಸ್ ಕೂಡ ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ' ಎಂದರು.

‘ಕಾಂಗ್ರೆಸ್ ಅಧಿಕಾರದಲ್ಲಿರುವ ರಾಜಸ್ಥಾನ, ಹಿಮಾಚಲ ಪ್ರದೇಶ ಹಾಗೂ ಚತ್ತೀಸಘಡದ ಚುನಾವಣೆಯಲ್ಲಿ ಪಕ್ಷವು ನೀಡಿದ ಪ್ರಮುಖ ಭರವಸೆಗಳನ್ನು ಈಡೇರಿಸಿದೆ. ರಾಜಸ್ಥಾನದಲ್ಲಿ ಎಲ್ಲ ನಾಗರಿಕರಿಗೂ ಆರೋಗ್ಯ ವಿಮೆ ಮಾಡಿಸಿದ್ದು, ₹ 25 ಲಕ್ಷದವರೆಗೆ ಚಿಕಿತ್ಸೆ ಉಚಿತವಾಗಿ ಸಿಗುತ್ತಿದೆ‌. ಹಿಮಾಚಲ ಪ್ರದೇಶ ಮತ್ತು ಚತ್ತೀಸಘಡದಲ್ಲಿ ಹಳೆ ಪಿಂಚಣಿ ಯೋಜನೆ ಜಾರಿಗೊಳಿಸಲಾಗಿದೆ' ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT