ಬುಧವಾರ, ಜುಲೈ 28, 2021
29 °C

ಕಾರು ಅವಘಡ: ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಪಾರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೂಡುಬಿದಿರೆ: ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ಸುದರ್ಶನ್‌ ಎಂ. ಪ್ರಯಾಣಿಸುತ್ತಿದ್ದ ಇನೋವಾ ಕಾರು ಇಲ್ಲಿಗೆ ಸಮೀಪದ ತೋಡಾರಿನಲ್ಲಿ ಬುಧವಾರ ಉರುಳಿ ಬಿದ್ದಿದ್ದು, ಅಪಾಯದಿಂದ ಪಾರಾಗಿದ್ದಾರೆ.

ಮಧ್ಯಾಹ್ನ 2 ಗಂಟೆ ಸುಮಾರಿಗೆ ತೋಡಾರು ಬಳಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋದ ಕಾರು ರಸ್ತೆ ಬದಿ ಉರುಳಿ ಬಿದ್ದಿದೆ.  

ಕಾರಿನಲ್ಲಿದ್ದ ಸುದರ್ಶನ್ ಎಂ. ಮತ್ತು ಕಾರು ಚಾಲಕ ಜಯ ಅಪಾಯದಿಂದ ಪಾರಾಗಿದ್ದಾರೆ. ಮೂಡುಬಿದಿರೆಯಿಂದ ಅವರು ಮಂಗಳೂರಿನಲ್ಲಿರುವ ಪಕ್ಷದ ಜಿಲ್ಲಾ ಕಚೇರಿಗೆ ತೆರಳುತ್ತಿದ್ದರು. ಇಬ್ಬರೂ ಸೀಟು ಬೆಲ್ಟ್ ಧರಿಸಿದರಿಂದ  ಜೀವಪಾಯದಿಂದ ಪಾರಾಗಿದ್ದಾರೆ. ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು